
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಸಂಜೆ ಪ್ರಕಟವಾಗಲಿದೆ.
ಅಭ್ಯರ್ಥಿಗಳು https://cetonline.karnataka.gov.in/kea/ ಲಿಂಕ್ ಬಳಸಿ ಸಂಜೆ 4 ಗಂಟೆಯ ನಂತರ ಫಲಿತಾಂಶ ಪಡೆಯಬಹುದಾಗಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಿಇಟಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಆಗಸ್ಟ್ 28ರಿಂದ 30ರ ವರೆಗೆ ಸಿಇಟಿ ಪರೀಕ್ಷೆ ನಡೆದಿದ್ದು, 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಸಿಇಟಿ ಬರೆದಿದ್ದು, 20 ದಿನದೊಳಗೆ ಫಲಿತಾಂಶ ನೀಡುತ್ತಿರುವುದು ದಾಖಲೆಯ ವಿಷಯವಾಗಿದೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						