ಬೆಂಗಳೂರು: ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಎರಡ್ಮೂರು ದಿನದಲ್ಲಿ 1 ಲಕ್ಷ ರೂ.ಪರಿಹಾರ ಬಿಡುಗಡೆ ಮಾಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪ್ರಶ್ನೆಗೆ ಸದನದಲ್ಲಿ ಇಂದು ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 7-8 ಸಾವಿರ ಬಿಪಿಎಲ್ ಪಡಿತರ ಚೀಟಿ ಕುಟುಂಬಗಳು ನೊಂದಾಯಿಸಿವೆ. ಎರಡು ಮೂರು ದಿನಗಳಲ್ಲಿ ಅವರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು ಎಂದರು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ ಯಾರಾದ್ರೂ ಸೋಂಕಿಗೆ ಬಲಿಯಾಗಿದ್ದರೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜೂನ್ ತಿಂಗಳಲ್ಲಿ ಘೋಷಿಸಿದ್ದರು.(ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….