ಕೃಷಿ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಬೇಕು: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು: ವಿದ್ಯಾರ್ಥಿಗಳು ಉದ್ಯೋಗ ಕೇಳುವವರಾಗದೇ ಉದ್ಯೋಗ ಸೃಷ್ಟಿಸುವವರು ವಿದ್ಯಾರ್ಥಿಗಳಾಗಬೇಕು.ಇಂತಹ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಿಂದ ಹೊರ ಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಕೃಷಿ ಸಚಿವರೂ ಅಗಿರುವ ಬೆಂಗಳೂರು ಜಿಕೆವಿಕೆ ಸಹಕಲಾಧಿಪತಿ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಜಿಕೆವಿಕೆ 55ನೇ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿ ಹಾಗೂ ರಾಜಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಭಾಗವಹಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಬೋಧಿಸಿ, ಬಂಗಾರದ‌ ಪದಕ ಹಾಗೂ ಪ್ರಮಾಣಪತ್ರ ಡಾಕ್ಟರೇಟ್ ಗೌರವ ನೀಡಿ ಗೌರವಿಸಿ ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕೃಷಿ ಹಾಗೂ ರೈತರ ಅಭಿವೃದ್ಧಿಗೆ ಇಲಾಖೆ ಹಾಗೂ ಸರ್ಕಾರ ಬದ್ಧವಾಗಿದ್ದು, 770 ಕೋಟಿ ರೂ.ಬಂಡವಾಳ ಹೂಡಿಕೆಯಲ್ಲಿ ಕೃಷಿತಂತ್ರಜ್ಞಾನಕ್ಕೆ‌ ಮಹತ್ತರ ಹೆಜ್ಜೆ ಇಟ್ಟು ಇದೇ ಗುರುವಾರ ಕೃಷಿ ಇಲಾಖೆ ಕರ್ನಾಟಕ ಸರ್ಕಾರ ಹೆಸ್ಕಾನ್ ಕಂಪೆನಿ ಜೊತೆ  85%:15%/ರಂತೆ ಒಡಂಬಡಿಕೆ ಮಾಡಿಕೊಳ್ಳುತ್ತಿರುವುದಾಗಿ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು  ಸಾಕಷ್ಟು ವಿಷಯಗಳಲ್ಲಿ ಸಾಧನೆ‌ ಮಾಡುತ್ತಿರುವುದನ್ನು ನೋಡಿದರೆ ಕೃಷಿಯತ್ತ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿರುವುದು ಕಂಡುಬರುತ್ತದೆ.ವಿದ್ಯಾರ್ಥಿಗಳು ಇಷ್ಟಕ್ಕೆ ತಮ್ಮ ಸಾಧನೆ ಮುಗಿಯಿತೆಂದು ಭಾವಿಸದೇ ಕೃಷಿ ಅಭಿವೃದ್ಧಿಯಲ್ಲಿ ತಮ್ಮ ವಿದ್ಯೆ ತಂತ್ರಜ್ಞಾನವನ್ನು ಬಳಸಿ ಪ್ರಗತಿಪರರಾಗಬೇಕು.ಕೃಷಿ ಉದ್ಯಮ‌ ನವೋದ್ಯಮ ಪ್ರಾರಂಭಿಸಬೇಕಿದೆ‌ ಎಂದು ಕೃಷಿ ಸಚಿವರು ಆಶಯ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಬೆನ್ನೆಲೆಬು ರೈತ ಎನ್ನುವುದನ್ನು ಮನಗಂಡು ರೈತರ ಆದಾಯ ದ್ವಿಗಿಣ ಮಾಡಲು ದೃಢ ಸಂಕಲ್ಪದ ಹೆಜ್ಜೆ ಇಟ್ಟು ಆಹಾರ ಉತ್ಪಾದಕ ಸಂಸ್ಥೆಗಳಿಗಾಗಿ ಹೆಚ್ಚು ಆದ್ಯತೆ ನೀಡಿದ್ದಾರೆ.ರೈತರ ಆದಾಯ ಹೆಚ್ಚಳಕ್ಕೆ ತಂತ್ರಜ್ಞಾನ ಬಳಸಿಕೊಳ್ಳಬೇಕು.

ವಿದ್ಯೆ ಹಾಗೂ ಪ್ರತಿಭೆ ಯಾರ ಸ್ವತ್ತೂ ಅಲ್ಲ.ಪ್ರತಿಭೆಯಿದ್ದರೆ ಯಾವುದೇ ಕಾಲೇಜಾಗಲೀ ವಿಶ್ವವಿದ್ಯಾಲಯವಾಗಲೀ ಬೆಳಕಿಗೆ ಬಂದೇ ಬರುತ್ತದೆ.ಕೃಷಿಕರ ಆದಾಯ ದ್ವಿಗುಣಗೊಳಿಸಲು ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ತಿಳಿಸಿದರು.

ಕೃಷಿ ಭೂಮಿ ತಾಯಿಯನ್ನು ನಂಬಿದರೆ ಎಂದಿಗೂ ಕೈಬಿಡುವುದಿಲ್ಲ.ಉದ್ಯೋಗವನ್ನು ಅರಸಿ ಬೇರೆಡೆಗೆ ಹೋಗುವುದಕ್ಕಿಂತ ಇರುವ ವಿದ್ಯೆ ತಂತ್ರಜ್ಞಾನವನ್ನು ಬಳಸಿ ಕೃಷಿಯಲ್ಲಿಯೇ ಸಾಧನೆ ಮಾಡಬಹುದೆನ್ನುವುದನ್ನು ತೋರಿಸಿಕೊಡುತ್ತಿದ್ದಾರೆ.

ಹೆಚ್ಚೆಚ್ಚು ಐಎಎಸ್ ಐಪಿಎಸ್‌ಗಳಲ್ಲಿ ಕೃಷಿ ವಿದ್ಯಾರ್ಥಿಗಳೇ ಮುಂದೆ ಬರುತ್ತಿರುವುದು ಸಂತಸದ ವಿಷಯ ಎಂದು ಸಚಿವರು ಹೇಳಿದರು.

ಆನ್ಲೈನ್ ಮೂಲಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಐಸಿಆರ್ ಕಾರ್ಯದರ್ಶಿಗಳಾದ ಡಾ.ತ್ರಿಲೋಚನಾ ಮೊಹಪಾತ್ರ ಪಾಲ್ಗೊಂಡರು.

ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜೇಂದ್ರ ಪ್ರಸಾದ್ ಸ್ವಾಗತಿಸಿ ವಿಶ್ವವಿದ್ಯಾಲಯದ ಸಾಧನೆ ಹಾಗೂ ನಡೆದು ಬಂದ ಹಾದಿಯನ್ನು ವಿವರಿಸಿದರು.

ಆಡಳಿತ ಮಂಡಳಿ, ಶೈಕ್ಷಣಿಕ ಮಂಡಳಿ ಸದಸ್ಯರು ಸೇರಿದಂತೆ ಮತ್ತಿತ್ತರರ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]