ದೊಡ್ಡಬಳ್ಳಾಪುರ: ತಾಲೂಕಿನ ಚನ್ನವೀರನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ, ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.
ಮೃತರನ್ನು ಚನ್ನವೀರನಹಳ್ಳಿ ಗ್ರಾಮದ ರಂಗರಾಜು (36 ವರ್ಷ) ಎಂದು ಗುರುತಿಸಲಾಗಿದ್ದು, ಮೃತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ರಂಗರಾಜು ಶವ ಹಗ್ಗದಿಂದ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದು, ವಿಷಯ ತಿಳಿದ ದೊಡ್ಡಬೆಳವಂಗಲ ಸಬ್ ಇನ್ಸ್‌ಪೆಕ್ಟರ್ ವಿ.ಗಜೇಂದ್ರ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….