ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯನ್ನು ಡಾ.ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 207 ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿದ್ದ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಕಟ್ಟಡ ನೆಲಸಮಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣದವರೆಗೂ ಅಂಬೇಡ್ಕರ್ ಭವನದಲ್ಲಿ ಕಾರ್ಯನಿರ್ವಹಿಸಲಿದೆ.
ಸೋಮವಾರ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಅಂಬೇಡ್ಕರ್ ಭವನದಲ್ಲಿ ಪೊಲೀಸ್ ಠಾಣೆ ಕಾರ್ಯಾರಂಭ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….