ಬೆಂ.ಗ್ರಾ.ಜಿಲ್ಲೆ: ಅಕ್ಟೋಬರ್ -01 ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ -2021″ರ ಪ್ರಯುಕ್ತ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು 2021ರ ಸೆಪ್ಟೆಂಬರ್ 22 ರಂದು ಬೆಳಗ್ಗೆ 10:30 ಗಂಟೆಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸ್ಪರ್ಧೆಗಳ ವಿವರ ಇಂತಿದೆ.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 60-69 ವರ್ಷ,70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ, ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ, ಚಿತ್ರ ಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ನಡಿಗೆ, ರಿಂಗ್ ನ್ನು ಬಕೆಟ್ ನಲ್ಲಿ ಎಸೆಯುವುದು, ಕೇರಂ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಆರೋಗ್ಯದ ಹಿತದೃಷ್ಟಿಯಿಂದ ಅನುಸರಿಸಬೇಕಾದ ಕ್ರಮಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ದೂ.ಸಂ.: 9980860605, ಯೋಜನಾ ಸಹಾಯಕರು ಮೊ.ಸಂ.: 7337709076, ವಿಕಲಚೇತನರ ಸಹಾಯವಾಣಿ ಕೇಂದ್ರ ದೂ.ಸಂ.: 080-29787441, ಮೊ.ಸಂ.: 9945925729, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ದೂ.ಸಂ.: 8027622030 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….