ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್/ ಎಸ್.ಎಸ್.ಸಿ/ ಆರ್.ಆರ್.ಬಿ ಮತ್ತು ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವೆಬ್ ಸೈಟ್ www.sw.kar.nic.in ನಲ್ಲಿ ಆನ್ ಲೈನ್ ಮೂಲಕ 2021ರ ಸೆಪ್ಟೆಂಬರ್ 30ರೊಳಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂ.ಸಂ.: 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ.: 27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ.: 27623681, ಹೊಸಕೋಟೆ ತಾಲ್ಲೂಕು ದೂ.ಸಂ.: 27931528 ಹಾಗೂ ನೆಲಮಂಗಲ ತಾಲ್ಲೂಕು ದೂ.ಸಂ.: 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಕೃಷ್ಣಪ್ಪ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….