ದೊಡ್ಡಬಳ್ಳಾಪುರ: ಕಿರಿಮಗ ಕುಟುಂಬವ ತೊರೆದು ಬೇರೆ ಮನೆ ಮಾಡಿದ ಕಾರಣ, ತಂದೆ-ತಾಯಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾದ್ರಿಪುರದಲ್ಲಿ ಸಂಭವಿಸಿದೆ.
ಮೃತರನ್ನು ಮಾರೇಗೌಡ (58ವರ್ಷ), ಗಂಗಮ್ಮ (52 ವರ್ಷ) ಎಂದು ಗುರುತಿಸಲಾಗಿದ್ದು, ಇಬ್ಬರು ಗಂಡು ಮಕ್ಕಳಲ್ಲಿ ಓರ್ವ ಪುತ್ರ ಬೆಂಗಳೂರಿನಲ್ಲಿದ್ದು, ಕಿರಿಯ ಮಗ ತಂದೆ-ತಾಯಿಯೊಂದಿಗಿದ್ದರು.
ಕಿರಿಮಗ ಬೇರೆ ಮನೆ ಮಾಡಿದರೆಂಬ ಕಾರಣಕ್ಕೆ ಮನನೊಂದು ವಿಷ ಸೇವಿಸಿದ ದಂಪತಿಗಳನ್ನು, ಕೂಡಲೇ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….