ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅಮೇರಿಕಾ ಪ್ರವಾಸ / ಮೊದಲ ಭೌತಿಕ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಭಾಗಿ

ನವದೆಹಲಿ: ಅಮೆರಿಕಾದ ಅಧ್ಯಕ್ಷ ಗೌರವಾನ್ವಿತ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ 2021ರ ಸೆಪ್ಟಂಬರ್ 22ರಿಂದ 25ರವರೆಗೆ ಅಮೆರಿಕಾಕ್ಕೆ ಭೇಟಿ ನೀಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇಂದು ವಿಶೇಷ ವಿಮಾನದಲ್ಲಿ ಅಮೆರಿಕಾ ಪ್ರವಾಸಕ್ಕೆ ತೆರಳುವ ಮುನ್ನ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

ನನ್ನ ಈ ಭೇಟಿಯ ವೇಳೆ ಅಧ್ಯಕ್ಷ ಬೈಡೆನ್ ಅವರೊಂದಿಗೆ ಭಾರತ-ಅಮೆರಿಕಾ ಜಾಗತಿಕ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಪರಾಮರ್ಶೆ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಸಲಾಗುವುದು. ಎರಡೂ ರಾಷ್ಟ್ರಗಳ ನಡುವೆ ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರದ ಅವಕಾಶಗಳನ್ನು ಅನ್ವೇಷಿಸುವ ಕುರಿತು ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರೊಂದಿಗಿನ ಭೇಟಿಯನ್ನು ಎದುರು ನೋಡುತ್ತಿದ್ದೇನೆ.

ನಾನು ಅಧ್ಯಕ್ಷ ಬೈಡನ್, ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಮಂತ್ರಿ ಯೋಶಿಹೈದ್ ಸುಗಾ ಅವರೊಂದಿಗೆ ಮೊದಲ ಭೌತಿಕ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಹಿಸಲಿದ್ದೇನೆ. ಶೃಂಗಸಭೆಯು ಈ ವರ್ಷ ಮಾರ್ಚ್ ನಲ್ಲಿ ನಡೆದ ವರ್ಚುವಲ್ ಶೃಂಗಸಭೆಯ ಫಲಿತಾಂಶಗಳ ಪ್ರಗತಿಯನ್ನು ಪರಾಮರ್ಶಿಸಲು ಅವಕಾಶ ಒದಗಿಸಲಿದೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ನಮ್ಮ ಸಮಾನ ಹಂಚಿಕೆಯ ದೃಷ್ಟಿಕೋನದ ಆಧಾರದ ಮೇಲೆ ಭವಿಷ್ಯದ ಸಹಭಾಗಿತ್ವದ ಆದ್ಯತೆಗಳನ್ನು ಗುರುತಿಸಲು ನೆರವಾಗಲಿದೆ.

ನಾನು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾರಿಸನ್ ಮತ್ತು ಜಪಾನ್ ನ ಪ್ರಧಾನಮಂತ್ರಿ ಸುಗಾ ಅವರನ್ನು ಭೇಟಿ ಮಾಡಿ ತಮ್ಮ ದೇಶಗಳೊಂದಿಗಿನ ಬಲವಾದ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಪರಾಮರ್ಶೆ ನಡೆಸಲಾಗುವುದು ಮತ್ತು  ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಉಪಯುಕ್ತ ವಿನಿಮಯವನ್ನು ಮುಂದುವರಿಸುತ್ತೇನೆ.

ಕೋವಿಡ್-19 ಸಾಂಕ್ರಾಮಿಕ, ಭಯೋತ್ಪಾದನೆಯನ್ನು ಎದುರಿಸುವ ಅಗತ್ಯತೆ, ಹವಾಮಾನ ವೈಪರೀತ್ಯ ಮತ್ತು ಇತರೆ ಪ್ರಮುಖ ಸಮಸ್ಯೆಗಳನ್ನು ಒಳಗೊಂಡಂತೆ ಜಾಗತಿಕ ಸವಾಲುಗಳನ್ನು ಕೇಂದ್ರೀಕರಿಸುವ ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ನಾನು ನನ್ನ ಪ್ರವಾಸವನ್ನು ಮುಕ್ತಾಯಗೊಳಿಸಲಿದ್ದೇನೆ.

ನನ್ನ ಈ ಅಮೆರಿಕಾ ಭೇಟಿ, ಅಮೆರಿಕಾದೊಂದಿಗಿನ ಸಮಗ್ರ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆಯ ಬಲವರ್ಧನೆಗೆ ಮತ್ತು ನಮ್ಮ ಕಾರ್ಯತಂತ್ರ ಪಾಲುದಾರರಾದ ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಸಂಬಂಧ ಬಲಪಡಿಸಲು ಮತ್ತು ಪ್ರಮುಖ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಸಹಯೋಗವನ್ನು ಮುಂದುವರಿಸಲು ಒಂದು ಸುಸಂದರ್ಭವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105939"]
ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ Cmsiddaramaiah

[ccc_my_favorite_select_button post_id="105901"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಕಳ್ಳತನ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕರೆದುಕೊಂಡು ಹೋಗುವಾಗ ಪರಾರಿಯಾಗುವ ಭರದಲ್ಲಿ ವಾಹನದಿಂದ ಜಿಗಿದು ಒಬ್ಬ ಸಾವನ್ನಪ್ಪಿರುವ (dies)

[ccc_my_favorite_select_button post_id="105926"]
ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಕೂಲಿ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="105861"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!