ದೊಡ್ಡಬಳ್ಳಾಪುರ: ತಾಲೂಕಿನಲ್ಲಿನ ಅಕ್ರಮ ಮೆಡಿಕಲ್ಸ್ ಗಳು, ಅನಧಿಕೃತ ಕ್ಲಿನಿಕ್ ಗಳು ಹಾಗೂ ಖಾಸಗಿ ನರ್ಸಿಂಗ್ ಹೊಂ ಗಳ ಕರ್ಮಕಾಂಡ ವಿರೋಧಿಸಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಸೆ.23ರಂದು ಬೆಳಗ್ಗೆ 11ಗಂಟೆಗೆ ಪ್ರತಿಭಟನೆ ಆಯೋಜಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕಿನಲ್ಲಿ ಅಕ್ರಮ ಮೆಡಿಕಲ್ಸ್ ಗಳು, ಅನಧಿಕೃತ ಕ್ಲಿನಿಕ್ ಗಳು ಹಾಗೂ ಖಾಸಗಿ ನರ್ಸಿಂಗ್ ಹೊಂಗಳ ಹಾವಳಿ ಮಿತಿಮೀರಿದೆ ಈ ನಿಟ್ಟಿನಲ್ಲಿ ಜಿಲ್ಲಾಪಂಚಾಯಿತಿ ಸಿಇಓ, ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಔಷಧ ನಿಯಂತ್ರಣ ನಿರೀಕ್ಷಕರು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..