ನಂದಿ ರಸ್ತೆಗೆ ಜಿಲ್ಲಾಧಿಕಾರಿ ಆರ್.ಲತಾ ದಿಢೀರ್ ಭೇಟಿ / ಕಾಮಗಾರಿ ಪೂರ್ಣಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ಚಿಕ್ಕಬಳ್ಳಾಪುರ: ನಗರದ 19, 16, 15, 11ನೇ ವಾರ್ಡ್ಗಳ ವ್ಯಾಪ್ತಿಯ ನಂದಿ ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ರಸ್ತೆ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ನಂದಿ ರಸ್ತೆಯ ಕಾಮಗಾರಿಯು ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಎರಡು ತಿಂಗಳ ಒಳಗಾಗಿ ಎಷ್ಟು ಸಾಧ್ಯವೋ ಅಷ್ಟು ಬೇಗ ಅದ್ಯತೆ ಮೇಲೆ ಈ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಈ ವೇಳೆ ಮಾತನಾಡುತ್ತಾ ಚಿಕ್ಕಬಳ್ಳಾಪುರ ನಗರದಿಂದ ನಂದಿ ರಸ್ತೆಗೆ ಸಾಗುವ 19, 16, 15, 11ನೇ ವಾರ್ಡ್ಗಳ ವ್ಯಾಪ್ತಿಯ 850 ಮೀ. ಉದ್ದದ ಸಿ.ಸಿ.ರಸ್ತೆಯನ್ನು ನಿರ್ಮಾಣ ಮಾಡುವ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಆಗಿ 6 ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಇದರಿಂದ ಅನಗತ್ಯ ಸಂಚಾರ ದಟ್ಟಣೆಯಾಗಿ ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇಲೆ ಈ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು. ಈ ಕಾಮಗಾರಿ ನಡೆಯುವ ಜಾಗದುದ್ದಕ್ಕೂ ಕಾಲ್ನಡಿಗೆಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿಗಳು ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. 

ರಾಜ್ಯ ಹಣಕಾಸು ಆಯೋಗದ ವಿಶೇಷ ಅನುದಾನಯಡಿ 3 ಕೋಟಿ ಬಿಡುಗಡೆಯಾಗಿದ್ದು, ಈ ಪೈಕಿ ಸ್ಟೇಡಿಯಂ ರಸ್ತೆಗೆ 70 ಲಕ್ಷ ಮತ್ತು ಚಿಕ್ಕಬಳ್ಳಾಪುರ ನಗರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ 30 ಲಕ್ಷ ಹಾಗೂ ನಂದಿ ರಸ್ತೆ ಅಭಿವೃದ್ಧಿಗೆ 192 ಲಕ್ಷ ಅನುದಾನ ನಿಗದಿಗೊಳಿಸಲಾಗಿತ್ತು. ಮೂರು ಕಾಮಗಾರಿಗಳ ಪೈಕಿ ಸ್ಟೇಡಿಯಂ ರಸ್ತೆ ಮತ್ತು ಸಿಸಿ ಕ್ಯಾಮರಾ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ನಂದಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು ರವರು ಮಾತನಾಡಿ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಹಣಕಾಸು ಆಯೋಗದಿಂದ 3 ಕೋಟಿ ಅನುದಾನವನ್ನು ವಿಶೇಷ ಅನುದಾನವನ್ನು ಮಂಜೂರು ಮಾಡಿಸಿಕೊಟ್ಟಿರುತ್ತಾರೆ. ಈ ಪೈಕಿ ಸ್ಟೇಡಿಯಂನ ಸಿ.ಸಿ ರಸ್ತೆ ಹಾಗೂ ನಂದಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು 2.62 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಈಗಾಗಲೇ ಸ್ಟೇಡಿಯಂ ರಸ್ತೆ ಕಾಮಗಾರಿ ಪೂರ್ಣಗೊಂಡಿರುತ್ತದೆ. ಆದರೆ ನಂದಿ ರಸ್ತೆಯ ಅಭಿವೃದ್ದಿ ಕಾಮಗಾರಿಗೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವುದು ಹಾಗೂ ರಸ್ತೆ ಇಕ್ಕೆಲಗಳ ಕೆಲವು ಪ್ರದೇಶಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವುದು ಕಾಮಗಾರಿ ವೇಗಕ್ಕೆ ತೊಡಕಾಗಿತ್ತು. ಪ್ರಸ್ತುತ ಆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಎರಡು ತಿಂಗಳೊಳಗಾಗಿ ನಂದಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸಿ.ಸಿ.ರಸ್ತೆ ಜನರ ಬಳಕೆಗೆ ಲಭ್ಯವಾಗಲಿದೆ ಎಂದರು. 

ಈ ಸಂದರ್ಭದಲ್ಲಿ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಪೌರಾಯುಕ್ತ ಎನ್.ಮಹಂತೆಶ್ ಹಾಗೂ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]