ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾನೂನಿನಲ್ಲಿ ಕನ್ನಡವನ್ನು ತಂದಿದ್ದರಿಂದ ನ್ಯಾಯಾಲಯಗಳಲ್ಲಿ ಕನ್ನಡ ಹೆಚ್ಚಾಗಿ ಬಳಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಭಾಷಾಂತರ ನಿರ್ದೇಶನಾಲಯ ಹೊರತಂದಿರುವ ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದರು.

ಕಾನೂನು ನಿಘಂಟು ಕೆಲಸ ಯಶಸ್ವಿಯಾಗಿದೆ. 2003ರಲ್ಲಿ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಿದ ನಂತರ ಅವು ಜನ ಸಾಮಾನ್ಯರಿಗೆ‌ ತಲುಪಿದವು. ಕಾನೂನುಗಳ ಅರ್ಥ ವ್ಯಾಪಕವಾಗಿ ಪ್ರಚಾರವಾಯಿತು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯಾಲಯ ಅದನ್ನು ಗುರುತಿಸಿ  ಮನ್ನಣೆಯನ್ನು ನೀಡಿದೆ. ಅದನ್ನು ಮುಂದುವರೆಸಿ ಇಂದು  ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಹೊರತಂದು   ಉತ್ತಮ ಕೆಲಸ ಮಾಡಿದೆ

ರಾಷ್ಟ್ರೀಯ  ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಾನೂನುಗಳನ್ನು ನಮ್ಮ ಜನರಿಗೆ ಸರಳವಾಗಿ ತಿಳಿಸುವ ಉದ್ದೇಶದಿಂದ ಈ ಮಹತ್ಕಾರ್ಯ ಸಾಧ್ಯವಾಗಿದೆ. ಇದಕ್ಕಾಗಿ ಶ್ರಮಪಟ್ಟಿರುವ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪ್ರೋತ್ಸಾಹ, ಬೆಂಬಲದಿಂದ ಇವೆಲ್ಲವನ್ನು ಮಾಡಲು ಸಾಧ್ಯವಾಗಿದೆ ಎಂದ ಅವರು, ಈ ಪ್ರಕ್ರಿಯೆ ಮುಂದುವರೆಯಬೇಕು. ಇನ್ನಷ್ಟು ಕನ್ನಡದ ಪದಗಳು ಕಾನೂನಿನಲ್ಲಿ ಬಳಕೆ ಆಗಬೇಕು ಹಾಗೂ ಕಾನೂನಿನಲ್ಲಿ ಬಳಕೆಯಾಗುವ ಪದಗಳು ಕನ್ನಡದಲ್ಲಿ ಬಳಕೆಯಾಗಬೇಕು ಎಂದರು.

ಇದೇ ವೇಳೆ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ 125  ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಹೊರತಂದಿರುವ ನಾಣ್ಯವನ್ನು ಸಮರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ನ್ಯಾಯ, ನೀತಿ, ಧರ್ಮ ಸದಾ ಒಟ್ಟಿಗೆ ಸಾಗುತ್ತದೆ. ಎಲ್ಲಿ ನ್ಯಾಯ ಇರುತ್ತದೆಯೋ ಅಲ್ಲಿ ನೀತಿ ಇರಬೇಕು. ಇವೆರಡೂ ಇದ್ದಲ್ಲಿ ಧರ್ಮ ಇರಲೇಬೇಕು. ಇಂದು ಒಂದೆಡೆ ಕಾನೂನಿನ ಪದಕೋಶ ಬಿಡುಗಡೆಯಾಗಿದ್ದು, ಮತ್ತೊಂದೆಡೆ ಪ್ರಭುಪಾದರನ್ನು ನೆನಪು ಮಾಡಿಕೊಂಡಿದ್ದೇವೆ. ಅವರು ಹಾಕಿಕೊಟ್ಟ ಕೃಷ್ಣನ ಪಥದಲ್ಲಿ ನಡೆಯಬೇಕು. ಭಗವದ್ಗೀತೆ ಮೂಲಕ ಬದುಕಿಗೆ ಕೃಷ್ಣ ಮಾರ್ಗದರ್ಶನ ನೀಡಿದಂತೆ ಅತ್ಯಂತ ಸರಳವಾಗಿ ಉತ್ಸಾಹದ ಮುಖಾಂತರ ಜಗತ್ತಿನ ಭಕ್ತರಲ್ಲಿ ತುಂಬಿದರು. ನ್ಯಾಯ,ನೀತಿ  ಕೃಷ್ಣನ ಧರ್ಮ. ಈ ಮೂರೂ ಅತ್ಯಂತ ಶ್ರೇಷ್ಠ ವಿಧಾನಸೌಧದಲ್ಲಿ ನಡೆದಿರುವುದು ಯೋಗಾಯೋಗ. ನ್ಯಾಯಾ, ನೀತಿ, ಧರ್ಮ ಪಾಲನೆಯೇ ಈ ಶಕ್ತಿಸೌಧದ ಮುಖ್ಯ ಕರ್ತವ್ಯವಾಗಿದೆ ಎಂದರು.

ಇಸ್ಕಾನ್ ದಕ್ಷಿಣ ಶಾಖಾಧ್ಯಕ್ಷ ಶ್ರೀ ವರದಕೃಷ್ಣದಾಸ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ ಟ್ವೀಟ್ ಡಿಲೀಟ್ ಮಾಡಿದ್ದೇಕೆ..?!

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ

ಮಹಿಳೆಯರ ಖಾತೆಗೆ 10 ಸಾವಿರ, ಮನೆಗೊಂದು ಸರ್ಕಾರಿ ನೌಕರಿ ಘೋಷಣೆ, ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ ಆರೋಪ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election)ಯಲ್ಲಿ NDA ಮೈತ್ರಿಕೂಟ

[ccc_my_favorite_select_button post_id="116212"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!