ಬೆಂ.ಗ್ರಾ.ಜಿಲ್ಲೆ: 2020-21ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರಗತಿಪರ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೇಷ್ಮೆ ಬೆಳೆಗಾರರು ಕನಿಷ್ಠ 1.00 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ರೇಷ್ಮೆ ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಅನುಜ್ಞಾ ಪುಸ್ತಕ, ರೇಷ್ಮೆ ಮೊಟ್ಟೆ / ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ಕೃಷಿ ವಿಸ್ತರಣಾಧಿಕಾರಿಗಳು/ರೇಷ್ಮೆ ಸಹಾಯಕ ನಿರ್ದೆಶಕರ ಕಚೇರಿಯನ್ನು ಸಂಪರ್ಕಿಸಿ, ಅಗತ್ಯ ದಾಖಲಾತಿಗಳನ್ನು ಒದಗಿಸಿ, ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು 2021 ಸೆಪ್ಟೆಂಬರ್ 30 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ರೇಷ್ಮೆ ಕೃಷಿ ಉಪನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಬೀರಸಂದ್ರ, ಕೊಠಡಿ ನಂ.225 ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನ ರೇಷ್ಮೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……