ಪೌರಕಾರ್ಮಿಕರು ಜನರ ಪ್ರೀತಿ ವಿಶ್ವಾಸಗಳಿಸಿ: ಪೌರಾಯುಕ್ತ ರಮೇಶ್ ಎಸ್.ಸುಣಗಾರ್

ದೊಡ್ಡಬಳ್ಳಾಪುರ: ಪೌರಕಾರ್ಮಿಕರಿಗೆ ಸರ್ಕಾರದಿಂದ ಹಿಂದೆಂದಿಗಿಂತ ಹೆಚ್ಚಿನ ಸೌಲಭ್ಯಗಳು ಈಗ ದೊರಕುತ್ತಿದ್ದು, ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಪೌರ ಕಾರ್ಮಿಕರು ನಿಷ್ಟೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಜನರ ಪ್ರೀತಿ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಕರೆ ನೀಡಿದರು.

ನಗರದ ಪುರಭವನದಲ್ಲಿ ನಗರಸಭೆ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದಶಕಗಳ ಹಿಂದೆ ಪೌರಕಾರ್ಮಿಕರಿಗೆ ವೇತನ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಎದುರಾಗಿತ್ತು. ಈ ಹಿಂದೆ ಪೌರ ಕಾರ್ಮಿಕರಲ್ಲಿ ಸಂಘಟನೆಯ ಕೊರತೆಯಿತ್ತು. ಆದರೆ ಈಗ ಸಂಘಟನಾತ್ಮಕವಾಗಿ ತಮಗೆ ಬೇಕಾದ ಸೌಲಭ್ಯಗಳನ್ನು ಪಡೆದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಕಾಶಗಳಿವೆ. ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸ ಹೆಚ್ಚು ಮಾಡುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಹಿರಿಯ ಅಕಾರಿಗಳನ್ನು ಮೆಚ್ಚಿಸಲು ಕಾರ್ಯ ನಿರ್ವಹಿಸದೇ ತಮ್ಮ ಆತ್ಮ ಸಾಕ್ಷಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅದೇ ದೊಡ್ಡ  ರಾಷ್ಟ್ರ ಪ್ರಶಸ್ತಿ ನೀಡಿದಂತೆ ಎಂದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ಶೋಷಿತರಿಗೆ ಸಮಾನತೆಯ ಹಕ್ಕುಗಳನ್ನು ನೀಡಿದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ನಾವು ಸ್ಮರಿಸಬೇಕಿದೆ.ಸ್ವಚ್ಛತೆಯಿಂದ ಜನರ ಆರೋಗ್ಯ ಸುಧಾರಿಸುತ್ತದೆ. ಅಂತಹ ಸ್ವಚ್ಛತೆಯ ಕಾರ್ಯ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳು  ಹಾಗೂ ಪೌರ ಕಾರ್ಮಿಕರ ದಿನಾಚರಣೆ ಅಭಿನಂದನೀಯ.  ಆದರೆ ಪೌರ ಕಾರ್ಮಿಕರು ನಗರ ಸ್ವಚ್ಛತಾ ಕಾರ್ಯದಲ್ಲಿ ತೊಡಗುವಾಗ ಸಾರ್ವಜನಿಕರು  ಎಲ್ಲೆಂದರಲ್ಲಿ ಕಸ ಹಾಕುವ ಮೂಲಕ ನಮ್ಮ  ಪ್ರಾಮಾಣಿಕ ಕಾರ್ಯಕ್ಕೆ ಸ್ಪಂಸದಿರುವುದು ನೋವಿನ ಸಂಗತಿ  ಎಂದರು.

ಕಾರ್ಯಕ್ರಮದಲ್ಲಿ  ನಗರಸಭೆ ವ್ಯವಸ್ಥಾಪಕ ಮುಮ್ತಾಜ್ ಪಾಷ, ಕಂದಾಯ ಅಧಿಕಾರಿ ರವೀಂದ್ರ ಜಾಯಗೊಂಡೆ, ಕಂದಾಯ ನಿರೀಕ್ಷಕ ನಾರಾಯಣ್, ಸಮುದಾಯ ಸಂಘಟನಾಕಾರಿ ಪ್ರಹ್ಲಾದ್, ಪೌರ ಕಾರ್ಮಿಕರ ಸಂಘದ ಜಿಲ್ಲಾ ಖಜಾಂಚಿ ವೆಂಕಟೇಶ ಬಾಬು, ತಾಲೂಕು ಕಾರ್ಯದರ್ಶಿ ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕರಾದ ರೂಪಾ ಸೇರಿದಂತೆ ನಗರಸಭೆ ಅಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಸಮಾರಂಭಕ್ಕೂ ಮುನ್ನ ನಗರಸಭೆ ಮುಂಭಾಗದಿಂದ ಪುರಭವನದವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ಪೌರಕಾರ್ಮಿಕರ ಮೆರವಣಿಗೆ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!