ಶಾಲೆ-ಕಾಲೇಜು, ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಭರ್ತಿಗೆ ಅವಕಾಶ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅ.1ರಿಂದ ಶಾಲೆಗಳಿಗೆ ಹಾಗೂ ಸಿನಿಮಾ ಮಂದಿರಗಳಿಗೆ ಪೂರ್ಣ ಸಾಮರ್ಥ್ಯದಲ್ಲಿ ನಡೆಯುವ ಅವಕಾಶ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ನ ಇಳಿಮುಖ ಹಿನ್ನೆಲೆ ಕೋವಿಡ್ 19 ಮಾರ್ಗಸೂಚಿಗ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ಅವರು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರನ್ನೊಳಗೊಂಡಂತೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. 

1 ರಿಂದ 5ನೇ ತರಗತಿ ಸದ್ಯಕ್ಕೆ ಓಪನ್ ‌ಇಲ್ಲ. 6-12 ನೇ ತರಗತಿಗಳಿಗೆ 100% ಹಾಜರಾತಿಗೆ ಅನುಮತಿ ನೀಡಲಾಗುತ್ತದೆ. ಸೋಮವಾರದಿಂದ ಶುಕ್ರವಾರ ದವರೆಗೆ ಶಾಲಾ ಕಾಲೇಜಿಗೆ ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.

ದೇವಸ್ಥಾನಕ್ಕೆ ಅವಕಾಶ ಸಂಬಂಧ ಅಲ್ಲಿನ ಜಿಲ್ಲಾಧಿಕಾರಿ ಗಳಿಗೆ ಅಧಿಕಾರ ನೀಡಲಾಗಿದೆ. ಜಿಲ್ಲೆಗಳಲ್ಲಿ ಅಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ಬಗ್ಗೆ ನಿರ್ಧಾರ ಮಾಡ್ತಾರೆ. ಇನ್ನು ಯಾದಗಿರಿ, ಮೈಸೂರು, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಚುರುಕು ಮಾಡಲು ಕ್ರಮಕೈಗೊಳ್ಳಲಾಗುತ್ತದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಸರಾಸರಿ 0.66 ರಷ್ಟಿದೆ. ಆದ್ದರಿಂದ ಕೆಲವು ಮಾರ್ಗಸೂಚಿಗಳಲ್ಲಿ ಬದಲಾವಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಇದರಂತೆ ಶೇ.1ಕ್ಕಿಂತ ಪಾಸಿಟಿವಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ 100 ರಷ್ಟು ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಪಾಸಿಟಿವಿ ದರ 2 ರಷ್ಟು ಆದರೆ ಸಿನಿಮಾ ಮಂದಿರಗಳೇ ಸ್ಥಗಿತ ಮಾಡ್ತೇವೆ. ನೈಟ್ ಕರ್ಫ್ಯೂ‌ 9ರ ಬದಲು ರಾತ್ರಿ 10ರಿಂದ ಇರಲಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದ್ದು, ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಪಾಸಿಟಿವಿ ರೇಟ್​​ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಯಗಳಲ್ಲಿ ಅಕ್ಟೋಬರ್ 1 ರಿಂದ 100% ರಷ್ಟು ಥಿಯೇಟರ್ ಗೆ ಅವಕಾಶ ನೀಡಲಾಗುತ್ತದೆ. ಕನಿಷ್ಠ 1 ಡೋಸ್​ ಹಾಕಿಸಿಕೊಂಡವರಿಗೆ ಅವಕಾಶ ನೀಡಲಾಗುತ್ತದೆ.

ಸಿನಿಮಾ ಥಿಯೇಟರ್​ಗಳಿಗೆ ಹಾಕಿರೋ ನಿಯಮಗಳೇ ಪಬ್ ಗಳಿಗೂ ಅನ್ವಯ ಆಗಲಿದ್ದು, ಅ.3 ರಿಂದ ಪಬ್​ಗಳು ಆರಂಭ ಮಾಡಲು ಅವಕಾಶ ನೀಡಲಾಗಿದೆ. ಮೂರನೇ ಅಲೆ ಬಗ್ಗೆ ತಜ್ಞರು ಅಧ್ಯಯನ ಮಾಡ್ತಿದ್ದಾರೆ. ಪಕ್ಕದ ರಾಜ್ಯಗಳಿಂದ ಸ್ವಲ್ಪ ಕೊವೀಡ್ ಹೆಚ್ಚಾಗಿದೆ. ಅದಕ್ಕಾಗಿ ಅಲ್ಲಿ ಹೆಚ್ಚು ನಿಗಾ ವಹಿಸಲು ಸೂಚನೆ ನೀಡಿದ್ದೇವೆ. ಮೂರನೇ ಅಲೆಗೆ ಯಾವ ರೀತಿ ಕ್ರಮ ಎಂಬುದನ್ನು ಮುಂದಿನ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!