ಚಿಕ್ಕಬಳ್ಳಾಪುರ: ಜಕ್ಕಲಮೊಡುಗು ಜಲಾಶಯದಲ್ಲಿ ಮುಳುಗಿ ಬೆಂಗಳೂರು ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಇಂದು ಜಲಾಶಯದ ಬಳಿ ಬೆಳಕಿಗೆ ಬಂದಿದೆ.
ಮೃತನನ್ನು ರೋಹಿತ್ (22 ವರ್ಷ) ಎಂದು ಗುರುತಿಸಲಾಗಿದೆ. ಜಲಾಶಯದಲ್ಲಿ ಈಜಲು ಹೋದ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ.
ಬೆಂಗಳೂರಿನ ಸಂಕದಕಟ್ಟೆ ನಿವಾಸಿಯಾಗಿ ರೋಹಿತ್ ಸ್ನೇಹಿತರೊಂದಿಗೆ ಆಗಮಿಸಿದ್ದರು. ಟೆಕ್ಕಿಯಾಗಿರೋ ರೋಹಿತ್, ವಾರಾಂತ್ಯದ ಕಾರಣ ಜಕ್ಕಲಮಡುಗು ಜಲಾಶಯದ ಬಳಿ ಆಗಮಿಸಿದ್ದರು ಎನ್ನಲಾಗಿದೆ.
ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ರೋಹಿತ್ ಮೃತ ದೇಹವನ್ನು ಹೊರ ತೆಗೆದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..