ಬೆಳೆ ವಿಮಾ ನಷ್ಟ ಪರಿಹಾರ ಪಾವತಿಗೆ ಐ.ಸಿ.ಐ.ಸಿ.ಐ ಬ್ಯಾಂಕ್‍ಗೆ ಗ್ರಾಹಕರ ಆಯೋಗ ಮಹತ್ವದ ಆದೇಶ

ಹಾವೇರಿ: ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಪ್ರಿಮಿಯಂ ಮೊತ್ತದ ವ್ಯತ್ಯಾಸದ ಪರಿಹಾರ ಹಣ ರೂ.21,916ಗಳನ್ನು 30 ದಿನದೊಳಗಾಗಿ ರೈತನಿಗೆ ಪಾವತಿಸುವಂತೆ ಶಿರಸಿ ಐ.ಸಿ.ಐ.ಸಿ.ಐ ಬ್ಯಾಂಕ್ ಶಾಖೆಗೆ ಜಿಲ್ಲಾ ಗ್ರಾಹಕರ ಆಯೋಗ  ಆದೇಶಿಸಿದೆ.

ಹಾನಗಲ್ ತಾಲೂಕು ಹೇರೂರ ಗ್ರಾಮದ ಚಂದ್ರಗೌಡ ವಿರುಪಾಕ್ಷಪ್ಪ ಪಾಟೀಲ ಅವರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ತಮ್ಮ 3.23 ಎಕರೆ ಜಮೀನಲ್ಲಿ  ಭತ್ತ(ನೀರಾವರಿ) ಬೆಳೆಯಲು 2017-18ರಲ್ಲಿ ಶಿರಸಿ ಐ.ಸಿ.ಐ.ಸಿ.ಐ ಬ್ಯಾಂಕ್ ಶಾಖೆಯಲ್ಲಿ ರೂ.6 ಲಕ್ಷ ಸಾಲ ಪಡೆದಿದ್ದರು. ಸಾಲದ ಹಣದಲ್ಲಿ ಬೆಳೆವಿಮೆ ಪ್ರೀಮಿಯಂ ಕಡಿತಮಾಡುವ ಸಂದರ್ಭದಲ್ಲಿ ನೀರಾವರಿ ಭತ್ತದ ಬದಲಾಗಿ ನೀರಾವರಿ ಗೋವಿನ ಜೋಳದ ಮೇಲೆ ಪ್ರೀಮಿಯಂ ಹಣ ಕಳುಹಿಸಿ ಸೇವಾ ನ್ಯೂನ್ಯತೆ ಎಸಗಿದ್ದರಿಂದ ಬೆಳೆವಿಮಾ ಪರಿಹಾರ ಮೊತ್ತ ರೂ.23,978.24 ಪಡೆಯಲು ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರಾದ ಸುನಂದಾ ಹಾಗೂ ಸದಸ್ಯರಾದ ಮಹೇಶ್ವರಿ ಬಿ.ಎಸ್. ಅವರು ಅಂಕಿ ಸಂಖ್ಯಾ ಶಾಸ್ತ್ರ ಇಲಾಖೆ ಪ್ರಕಾರ ಶೇ.28.30ರಷ್ಟು ಬೆಳೆ ಹಾನಿ ಪ್ರಕಾರ ರೂ.21,916/-, ಪ್ರಕರಣದ ಖರ್ಚು ರೂ. ಒಂದು ಸಾವಿರ ಹಾಗೂ  ಮಾನಸಿಕ ಮತ್ತು ದೈಹಿಕ ತೊಂದರೆಗಾಗಿ ರೂ.ಎರಡು ಸಾವಿರ ಪಾವತಿಸಲು ಆದೇಶ ಹೊರಡಿಸಿದ್ದಾರೆ.

ಆದೇಶವಾದ 30 ದಿನಗಳಲ್ಲಿ ಮೊತ್ತ ಪಾವತಿಸಲು ವಿಫಲವಾದರೆ ವಾರ್ಷಿಕ ಶೇ.9ರ ಬಡ್ಡಿ ಸಮೇತ ಪಾವತಿಸಬೇಕು ಎಂದು ಆದೇಶಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ  ಪರಿಹಾರ ಆಯೋಗದ  ಸಹಾಯಕ ನೋಂದಣಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿ ಕರಿಯಪ್ಪ ಬಡಪ್ಪಳವರ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಸ ವಿಲೇವಾರಿಗೆ ಅಡ್ಡಿಪಡಿಸಿದರೆ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಕಸ ವಿಲೇವಾರಿಗೆ ಅಡ್ಡಿಪಡಿಸಿದರೆ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು,

“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ

[ccc_my_favorite_select_button post_id="119522"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!