ದೊಡ್ಡಬಳ್ಳಾಪುರ: ಆಟೋ ಮಗುಚಿ ಬಿದ್ದು ವೃದ್ದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ, ನಗರದ ಹೊರವಲಯದ ಪಾಲನಜೋಗಹಳ್ಳಿಯ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.
ಟಿಬಿ ವೃತ್ತದ ಕಡೆಯಿಂದ ಬರುತ್ತಿದ್ದ ಆಟೋ, ಮುಂಭಾಗದಲ್ಲಿ ಸಾಗುತ್ತಿದ್ದ ಸಿಮೆಂಟ್ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಸುಮಾರು 70 ವರ್ಷದ ವೃದ್ದೆಗೆ ಗಂಭೀರ ಗಾಯಗಳಾಗಿದ್ದು, ಉಳಿದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……