ದೊಡ್ಡಬಳ್ಳಾಪುರ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡದೆ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ರೈತ ಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎ.ಸುಬ್ರಮಣ್ಯ ತಿಳಿಸಿದ್ದಾರೆ.
ಭಾರತ್ ಬಂದ್ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಕೃಷಿ ಕಾಯ್ದೆ ವಿರೋಧಿಸಿ ರೈತ ಪರ ಸಂಘಟನೆಗಳು ಸೆ.27ರಂದು ಭಾರತ್ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬಂದ್‍ಗೆ ನೈತಿಕ ಬೆಂಬಲವಷ್ಟೇ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಆ ದಿನದಂದು ಶಾಲಾ-ಕಾಲೇಜುಗಳನ್ನ ಮುಚ್ಚುವುದಿಲ್ಲ. ಕೋವಿಡ್‍ನಿಂದಾಗಿ ಬಾಗಿಲು ಮುಚ್ಚಿದ್ದ ಶಾಲೆಗಳು ಈಗಷ್ಟೆ ಆರಂಭವಾಗುತ್ತಿವೆ. ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಶಾಲೆಗಳನ್ನ ಬಂದ್ ಮಾಡಲು ಆಗುವುದಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿ ಧರಿಸಿ ಈ ಮೂಲಕ ಭಾರತ್ ಬಂದ್‍ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……