ವಾಷಿಂಗ್ಟನ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಯ ಸಮಯದಲ್ಲಿ ಅಮೆರಿಕವು 157 ಕಲಾಕೃತಿಗಳು ಮತ್ತು ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದೆ. ಕಂಚಿನ ನಟರಾಜ ಸೇರಿದಂತೆ ಹಲವು ಮೌಲ್ಯಯುತ ಕಲಾಕೃತಿಗಳು ಇದರಲ್ಲಿ ಸೇರಿವೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಕಳ್ಳತನ, ಅಕ್ರಮ ವ್ಯಾಪಾರ ಮತ್ತು ಸಾಂಸ್ಕೃತಿಕ ವಸ್ತುಗಳ ಕಳ್ಳಸಾಗಣೆ ವಿರುದ್ಧ ಹೋರಾಡಲು ತಮ್ಮ ಪ್ರಯತ್ನಗಳನ್ನು ಬಲಪಡಿಸಲು ಬದ್ಧರಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
10ನೇ ಶತಮಾನದ ರೇವಾಂತ ಕಲ್ಲಿನ ವಿಗ್ರಹ, 12ನೇ ಶತಮಾನದ ತಾಮ್ರದ ನಟರಾಜನ ವಿಗ್ರಹ, 11 ಮತ್ತು 14ನೇ ಶತಮಾನದ ಪುರಾತತ್ವ ವಸ್ತುಗಳು ಕಲಾಕೃತಿಗಳು, ಟೆರಾಕೋಟಾ ಹೂದಾನಿ ಜೊತೆಗೆ 45 ಪ್ರಾಚೀನ ವಸ್ತುಗಳನ್ನು ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿಯಲ್ಲಿ ಭಾರತಕ್ಕೆ ಹಸ್ತಾಂತರಿಸಿದೆ.
ಪ್ರಧಾನ ಮಂತ್ರಿ ಮೋದಿ ಪುರಾತನ ವಸ್ತುಗಳನ್ನು ಭಾರತಕ್ಕೆ ವಾಪಸ್ ಒಯ್ಯಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……