ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.
ಭಾನುವಾರ ರಾತ್ರಿ 8:45 ರ ವೇಳೆಗೆ ನಿರ್ಮಾಣ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಪ್ರಧಾನಿ ಮೋದಿ ಸುಮಾರು 1 ಗಂಟೆಗಳಿಗೂ ಹೆಚ್ಚಿನ ಸಮಯವನ್ನು ಆ ಪ್ರದೇಶದಲ್ಲಿ ಕಳೆದಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿ ನೌಕರರೊಂದಿಗೆ ಮಾತನಾಡಿದ್ದಾರೆ.
ಹೊಸ ಸಂಸತ್ ಭವನ 2022 ರಲ್ಲಿ ಪೂರ್ಣಗೊಂಡು ಲೋಕಾರ್ಪಣೆಯಾಗುವ ಸಾಧ್ಯತೆ ಇದ್ದು, ಮುಂದಿನ ವರ್ಷದ ಚಳಿಗಾಲದ ಅಧಿವೇಶನ ಹೊಸ ಸಂಸತ್ ಭವನದಲ್ಲಿ ನಡೆಯಲಿದೆ.
ಹೊಸ ಸಂಸತ್ ಭವನ ಸುಮಾರು 64,500 ಚದರ ಮೀಟರ್ ನ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿದೆ. ಹೊಸ ಸಂಸತ್ ಭವನದಲ್ಲಿ ಲೋಕಸಭೆಯ 888 ಸದಸ್ಯರಿಗೆ ಆಸನ ವ್ಯವಸ್ಥೆ ಇರಲಿದ್ದು, ರಾಜ್ಯಸಭೆಯಲ್ಲಿ 384 ಸದಸ್ಯರಿಗೆ ಆಸನ ವ್ಯವಸ್ಥೆ ಇರಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……