ದೊಡ್ಡಬಳ್ಳಾಪುರ: ತಾಲ್ಲೂಕಿನ ನಾಗಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ನಾಲ್ಕು ದಿನಗಳ ಹಿಂದೆ ಕಳುವಾಗಿದ್ದ ಹುಂಡಿ ಭಾನುವಾರ ದೇವಾಲಯ ಸಮೀಪದಲ್ಲಿನ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ.
ಗ್ರಾಮದ ಅಂಚಿನಲ್ಲೇ ಇರುವ ದೇವಾಲಯದಲ್ಲಿ ತುಂಬಾ ದಿನಗಳಿಂದ ಹುಂಡಿಯಲ್ಲಿನ ಹಣವನ್ನು ಎಣಿಕೆ ಮಾಡಿರಲಿಲ್ಲ. ಹೀಗಾಗಿ ಹುಂಡಿಯಲ್ಲಿ ಹೆಚ್ಚಿನ ಹಣವೇ ಸಂಗ್ರಹವಾಗಿತ್ತು ಎಂದು ಅಂದಾಜಿಸಲಾಗಿದೆ.
ಹುಂಡಿ ಕಳವುವಾಗಿದ್ದ ದಿನ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ದಿನ ಹುಂಡಿ ಪತ್ತೆಯಾಗಿರಲಿಲ್ಲ. ಆದರೆ ಕಳುವಾಗಿದ್ದ ಹುಂಡಿ ಭಾನುವಾರ ದೇವಾಲಯ ಸಮೀಪದಲ್ಲಿನ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……