ದೊಡ್ಡಬಳ್ಳಾಪುರ: ಕೃಷಿ ಕಾಯ್ದೆ ವಿರೋಧಿಸಿ ರೈತ ಪರ ಸಂಘಟನೆಗಳು ಇಂದು (ಸೆ.27) ಕರೆ ನೀಡಿರುವ ಭಾರತ್ ಬಂದ್‍ಗೆ ಪೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದಿಂದ ನೈತಿಕ ಬೆಂಬಲ ನೀಡುತ್ತಿದ್ದು, ಸ್ಟುಡಿಯೋಗಳು ಪ್ರತಿದಿನದಂತೆ ಕಾರ್ಯ ನಿರ್ವಹಿಸುತ್ತವೆ ಎಂದು ಸಂಘದ ಅಧ್ಯಕ್ಷ ಎನ್.ಅಶ್ವಥ್ ತಿಳಿಸಿದ್ದಾರೆ.
ಭಾರತ್ ಬಂದ್ ಗೆ ಬೆಂಬಲ ನೀಡುವ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಸಂಘದಿಂದ ತಾಲೂಕಿನಲ್ಲಿ ಭಾರತ್ ಬಂದ್‍ಗೆ ನೈತಿಕ ಬೆಂಬಲ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕೋವಿಡ್ ಸೋಂಕು ತಡೆಗಟ್ಟಲು ಘೋಷಿಸಲಾದ ಲಾಕ್‍ಡೌನ್ ಹಾಗೂ ಸಮಾರಂಭಗಳಿಗೆ ಹಲವು ನಿಯಮಗಳ ಕಾರಣ ಛಾಯಾಗ್ರಾಹಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಆ ಕಾರಣ ರೈತ ಪರ ಸಂಘಟನೆಗಳ ಭಾರತ್ ಬಂದ್ ಕರೆಗೆ ನೈತಿಕ ಬೆಂಬಲ ಮಾತ್ರ ಸೂಚಿಸುತ್ತಿದ್ದು, ಸ್ಟುಡಿಯೋಗಳು ಬಾಗಿಲು ಮುಚ್ಚುವುದಿಲ್ಲ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……