ಭಾರತ್ ಬಂದ್: ಪ್ರತ್ಯೇಕ ಪ್ರತಿಭಟನೆ ಮೂಲಕ ಹಕ್ಕೋತ್ತಾಯದ ಮನವಿ ಸಲ್ಲಿಸಿದ ಪ್ರಜಾ ವಿಮೋಚನಾ ಚಳುವಳಿ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ ಎಂದು ಪ್ರಜಾ ವಿಮೋಚನಾ ಚಳುವಳಿ PVC – ಸ್ವಾಭಿಮಾನದ ರಾಜ್ಯಾಧ್ಯಕ್ಷ ಮುನಿಆಂಜನಪ್ಪ ಬೇಸರ ವ್ಯಕ್ತಪಡಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳು, ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಬೆಲೆ ಏರಿಕೆ ಖಂಡಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ನಡೆಸಲಾದ ಪ್ರತ್ಯೇಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇಶದ ಕೃಷಿ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಇದುವರೆಗೂ ಯಾವುದೇ ರಾಜ್ಯ ಸರ್ಕಾರಗಳು ಜಾರಿಗೊಳಿಸಿಲ್ಲ. ಆದರೆ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಮಾತ್ರ ತರಾತುರಿಯಲ್ಲಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ರೈತ ವಿರೋಧಿ ಆಡಳಿತಕ್ಕೆ ಮುಂದಾಗಿದೆ. ಸದಸ್ಯದಲ್ಲೇ ಕೃಷಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಹಾಗೂ ನೇಕಾರರಿಗೆ ಸಬ್ಸಿಡಿದರದಲ್ಲಿ ನೀಡಲಾಗುತ್ತಿರುವ ವಿದ್ಯುತ್ ಎಲ್ಲವು ಸಹ ಸ್ಥಗಿತಗೊಳ್ಳಲಿವೆ. ವಿದ್ಯುತ್ ವಲಯ ಸಂಪೂರ್ಣವಾಗಿ ಖಾಸಗಿಯವರ ಪಾಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಅಧ್ಯಕ್ಷ ಹನುಮಣ್ಣ ಗೂಳ್ಯ ಮಾತನಾಡಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳಿಂದ ಕೇವಲ ರೈತರ ಬದುಕು ಮಾತ್ರ ಬೀದಿಗೆ ಬರುವುದಿಲ್ಲ.ಕೃಷಿಯನ್ನು ನಂಬಿ ಜೀವನ ನಡೆಸುತ್ತಿರುವ ಇತರರು ಸಹ ಜೀವನ ನಡೆಸುವುದು ಕಷ್ಟವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ತಳಗವಾರ ಪುನಿತ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಜನತೆ ಬಸವಳಿಯುತ್ತಿದ್ದಾರೆ. ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ಬೇಳೆ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು ಮಧ್ಯಮ ಹಾಗೂ ಬಡ ವರ್ಗದ ಜನತೆ ನರಳುವಂತಾಗಿದೆ ಎಂದರು.

ಈ ವೇಳೆ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ಹಕ್ಕೊತ್ತಾಯ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಕಳುಹಿಸಲಾಯಿತು.

ಬೆಂಗಳೂರು ನಗರ ಅಧ್ಯಕ್ಷ ಆಯುಬ್ ಖಾನ್, ಪ್ರಧಾನ ಕಾರ್ಯದರ್ಶಿ ಚನ್ನ ಮರಿಯಪ್ಪ, ಹೊಸಕೋಟೆ ತಾಲೂಕು ಅಧ್ಯಕ್ಷ ಶಿವಕುಮಾರ್,  ಉಪಾಧ್ಯಕ್ಷ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಕಾರ್ಮಿಕ ಘಟಕದ ಅಧ್ಯಕ್ಷ ಅಶೋಕ್ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಅರ್ಹರಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಅರ್ಹರಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

[ccc_my_favorite_select_button post_id="115614"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!