ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ರೈತ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆಯೇ ರಸ್ತೆಗಿಳಿಯುವ ಮೂಲಕ ಬಂದ್ ನ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ.
ಸಾರಿಗೆ ಚಾಲಕರು ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿರುವುದರಿಂದ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ.
ರೈತ ಪರ ಸಂಘಟನೆ ಮುಖಂಡರು ಬೈಕ್ ರ್ಯಾಲಿ ನಡೆಸುವ ಮೂಲಕ ನಗರದ ಆಟೋ ಚಾಲಕರು ಮತ್ತು ಬಸ್ ಚಾಲಕರಿಗೆ ಕೈಮುಗಿದು ಬಂದ್ ಗೆ ಬೆಂಬಲಿಸುವಂತೆ ಕೋರುತ್ತಿದ್ದಾರೆ.
ಪೊಲೀಸ್ ನಿಗಾ: ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಗಾವಹಿಸಿದ್ದಾರೆ. ಬಲವಂತದ ಬಂದ್ ಗೆ ಅವಕಾಶ ಇಲ್ಲದ ಕಾರಣ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……