ದೊಡ್ಡಬಳ್ಳಾಪುರದಲ್ಲಿ ಭಾರತ್ ಬಂದ್ ಶಾಂತಿಯುತ / ಪ್ರತಿಭಟನಾ ಮೆರವಣಿಗೆ

ದೊಡ್ಡಬಳ್ಳಾಪುರ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಬೆಂಬಲಿಸಿ, ‘ಸಂಯುಕ್ತ ಹೋರಾಟ-ಕರ್ನಾಟಕ’ ನೇತೃತ್ವದಲ್ಲಿ  (ರೈತ, ದಲಿತ, ಕಾರ್ಮಿಕ, ಕನ್ನಡಪರ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ) ಕರೆ ನೀಡಿದ್ದ ದೊಡ್ಡಬಳ್ಳಾಪುರ ಬಂದ್ ಶಾಂತಿಯುತವಾಗಿ ನಡೆಯಿತು.

ನಗರದಲ್ಲಿ ಬೆಳಗಿನಿಂದಲೇ ಬಂದ್ ಬೆಂಬಲಿಸಿ ಸಂಘಟನೆಗಳು ರಸ್ತೆಗಿಳಿದವಾದರೂ ಅಂಗಡಿ ಮುಂಗಟ್ಟುಗಳು ಎಂದಿನಿಂತಂತ ವ್ಯಾಪಾರಗಳು ನಡೆದವು. ಎಪಿಎಂಸಿ  ಕೆಲ ಕಾಲ ಬಂದ್ ಆಗಿತ್ತು. ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಆರಂಭವಾಯಿತು. ಈ ವೇಳೆ ಬಸ್ ಸಂಚಾರ ಕೈಗೊಳ್ಳದಂತೆ ಬಂದ್‍ಗೆ ಬೆಂಬಲಿಸುವಂತೆ, ಸಾರಿಗೆ ಇಲಾಖೆಯ ಸಿಬ್ಬಂದಿಗೆ ಪ್ರತಿಭಟನಾಕಾರರು ಮನವಿ ಮಾಡಿದರು. ಆದರೆ ಬಸ್ ಸಂಚಾರ ಎಂದಿನಂತೆ ಸಂಚರಿಸಿತು. ನಂತರ ಬ್ಯಾಕ್ ರ್ಯಾಲಿಯಲ್ಲಿ ತೆರಳಿದ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ತೆರೆದಿದ್ದ ಹೋಟೆಲ್ ಹಾಗೂ ಕೆಲವು ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು.

ತಾಲೂಕಿನ ಎಲ್ಲಾ ಬ್ಯಾಂಕ್‍ಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.  ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ನೇಕಾರಿಕೆ ಉದ್ಯಮ ಸಹ ಎಂದಿನಂತೆ ಸಾಗಿತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಪ್ರತಿಭಟನಾ ಮೆರವಣಿಗೆ: ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಡಾ.ರಾಜ್‍ಕುಮಾರ್ ವೃತ್ತದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ, ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ಕಾಂಗ್ರೆಸ್ ಪಕ್ಷದ ವಿರೋಧವಿದೆ. ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ಇನ್ನು ಪೆಟ್ರೋಲ್ – ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ಸಾಮಾನ್ಯರ ಬದುಕನ್ನು ದುಸ್ತರವಾಗಿಸಿವೆ ಎಂದರು.

ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಹಲವು ಎಪಿಎಂಸಿಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಹರಿಯಾಣ ಮತ್ತು ಪಂಜಾಬ್‍ಗಳಲ್ಲಿ ಶೇ.90ರಷ್ಟು ಕೃಷಿ ಉತ್ಪನ್ನಗಳನ್ನು ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸಲಿದೆ. ಕೃಷಿ ಕಾಯ್ದೆಗಳ ತಿದ್ದುಪಡಿಯಿಂದ ಇದಕ್ಕೆ ಮಾರಕವಾಗಲಿದೆ ಖಾಸಗೀಕರಣದಿಂದ ಸಾಮಾಜಿಕ ಅಸಮಾನತೆ ಹೆಚ್ಚಾಗಲಿದ್ದು, ಸಂವಿಧಾನದ ಆಶಯಕ್ಕೆ ದಕ್ಕೆಯಾಗಲಿದೆ. ವಿದ್ಯುತ್ ಖಾಸಗೀಕರಣದಿಂದ ಜನರ ಬದುಕು ದುಸ್ತರವಾಗಲಿದೆ. ಪ್ರಿಪೈಡ್ ವಿದ್ಯುತ್ ಮೀಟರ್ ಅಳವಡಿಕೆ ನಾವು ವಿರೋಧಿಸಲೇಬೇಕು. ಜಿಎಸ್‍ಟಿಯಿಂದ ರಾಜ್ಯಗಳು ಸ್ವಾಯತ್ತತಗೆ ದಕ್ಕೆ ಆಗಲಿದೆ. ಮೋದಿ ಆಪ್ತ ಅದಾನಿ ಇಂದು ದೇಶದ ದೊಡ್ಡ ಶ್ರೀಮಂತರಾಗಿದ್ದಾರೆ.  ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಜಿಎಸ್‍ಟಿ,ಆಧಾರ್ ಕಾರ್ಡ್ ಸೇರಿದಂತೆ ಪ್ರತಿಯೊಂದನ್ನೂ ವಿರೋಧಿಸುತ್ತಿದ್ದ ಮೋದಿ ಅವರು ಇಂದು ಅದಕ್ಕೂ ಮೀರಿದ ರೈತ ವಿರೋಧಿ ಕಾನೂನನ್ನು ಜಾರಿಗೆ ತರುತ್ತಿದ್ದಾರೆ.

ಕಾರ್ಪೋರೇಟ್ ಕಂಪನಿಗಳ ಪರವಾಗಿ ಕಾರ್ಮಿಕ ಕಾಯ್ದೆಗೆ ತಿದ್ದುಪಡಿಗಳನ್ನು ತಂದು ನಾಲ್ಕು ಕಾರ್ಮಿಕ ಸಂಹಿತೆಗಳಾಗಿ ಮಾರ್ಪಡಿಸಿರುವ ಕ್ರಮವನ್ನು ಕೈ ಬಿಡಬೇಕು.

ಕಾರ್ಪೊರೇಟ್ ಕಂಪನಿಗಳ ಕೈಗೆ ಕೃಷಿ ಸಿಕ್ಕರೆ ಏನಾಗುತ್ತದೆ ಎನ್ನುವ ನಿದರ್ಶನ ನಮ್ಮ ಕಣ್ಣ ಮುಂದಿದ್ದು, ಕಳಪೆ ಬೀಜದಿಂದ ಹೂ ಕೋಸು ಬೆಳೆ ನಾಶವಾಗಿದೆ. ಕೃಷಿ ಭೂಮಿ, ಕೃಷಿ ಉತ್ಪಾದನೆ, ಕೃಷಿ ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ವಹಿಸುವುದರಲ್ಲಿ ಸರ್ಕಾರಗಳು ಮುಂದಾಗಿದ್ದು, ರೈತರ ವಿರೋಧಿ ಕೃಷಿ ನೀತಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ವಿವಿಧ ಪಕ್ಷಗಳ, ಸಂಘಟನೆಗಳ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!