ಪ್ರವಾಸೋದ್ಯಮ ಆವರ್ತಕ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ  ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ವಿಶ್ವವಿಖ್ಯಾತ ನಂದಿ ಬೆಟ್ಟ, ರಂಗಸ್ಥಳ, ಶ್ರೀನಿವಾಸ ಸಾಗರ ಹಾಗೂ ಇನ್ನಿತರ ಪ್ರಸಿದ್ಧ  ಪ್ರವಾಸಿ ತಾಣಗಳನ್ನು ಒಳಗೊಂಡಂತೆ ಒಂದು ಪ್ರವಾಸಿ ಆವರ್ತಕವನ್ನು (Tourism circuit) ನಿರ್ಮಾಣ ಮಾಡಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಅವರು ಸೋಮವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ  ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ   ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಿಂಬಿಸುವ ಚಿತ್ರ ಕಲೆ ಬಿಡಿಸುವ ಚಿತ್ರ ಕಲಾ ಶಿಬಿರವನ್ನು ಸ್ವತ: ಡಿಸಿಯವರು ಕುಂಚದಲ್ಲಿ ಸಹಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳಿಂದ ಚಿತ್ರ ಕಲೆ ವೀಕ್ಷಣೆ: ಚಿತ್ರ ಕಲಾ ಶಿಬಿರದಲ್ಲಿ  ಚಿತ್ರಕಲಾ ಶಿಕ್ಷಕರು ಮತ್ತು ಚಿತ್ರಕಲಾ ಪರಿಷತ್ತಿನ ವಿದ್ಯಾರ್ಥಿಗಳಿಂದ  ಬಿಡಿಸಲ್ಪಟ್ಟಿರುವ ಜಿಲ್ಲೆಯ ಪ್ರವಾಸಿ ತಾಣಕ್ಕೆ ಹೆಸರುವಾಸಿಯಾದ ಚಿತ್ರಗಳು ಮತ್ತು  ಪ್ರವಾಸ ತಾಣಗಳನ್ನ ಬಿಂಬಿಸುವ ಚಿತ್ರಗಳು ಅಂದವಾಗಿ ಮೂಡಿಬಂದಿವೆ ಹಾಗೂ ಜನರ ಗಮನ ಸೆಳೆಯಲಿವೆ ಈ    ಎಲ್ಲಾ ಕಲಾ ಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶನಕ್ಕಿಡುವ ಮೂಲಕ ಸಂರಕ್ಷಿಸಲಾಗುವುದು ಜೊತೆಗೆ ಗಣ್ಯರಿಗೆ ಉಡುಗೊರೆ ನೀಡಲು ಸಹ ಬಳಸಿಕೊಳ್ಳಲಾಗುವುದು. ಈ ಶಿಬಿರ ಚಿತ್ರ ಕಲಾವಿದರಿಗೆ ವೇದಿಕೆ ಯಾಗಿ ಪ್ರತಿಭೆ  ಹೊರ ಹೊಮ್ಮಲು ಸಹಕಾರಿಯಾಗುವ ಜೊತೆಗೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೂ  ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿಗಳು  ಚಿತ್ರ ಕಲೆ ವೀಕ್ಷಣೆ ಮಾಡಿ ಅಭಿಪ್ರಾಯಪಟ್ಟರು.

ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಒಂದು ದಿನ ಪೂರ್ತಿ ಪ್ರವಾಸದ ಮೂಲಕ ಕಳೆಯಲು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ  ತಾಣಗಳನ್ನು ಸಂದರ್ಶಿಸಿ ಪ್ರವಾಸ ಮಾಡಲು ಅನುಕೂಲವಾಗುವ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಒಂದು ಪ್ರವಾಸಿ ಆವರ್ತಕವನ್ನು ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆದು ಜಿಲ್ಲೆಯ ಪ್ರವಾಸೋದ್ಯಮವನ್ನು  ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗುತ್ತಿದೆ. ವಿಶ್ವ ವಿಖ್ಯಾತ  ನಂದಿ  ಗಿರಿ ಧಾಮ ಸೇರಿದಂತೆ ಜಿಲ್ಲೆಯಲ್ಲಿ  ಸಾಕಷ್ಟು ಪ್ರಸಿದ್ಧ ಪ್ರವಾಸಿ ತಾಣಗಳಿದ್ದು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿಪುಲವಾದ ಅವಕಾಶಗಳಿವೆ.ಅಲ್ಲದೆ ಹೊಸದಾಗಿ  ಹಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ಎಕೋ ಥೀಮ್ ಪಾರ್ಕ್  ಕಾಮಗಾರಿ ಶಂಕುಸ್ಥಾಪನೆ: ಹೊಸದಾಗಿ  ಹಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಕೆ.ಆರ್.ಎಸ್.ಬೃಂದಾವನ ಮಾದರಿಯಲ್ಲಿ ಕಂದವಾರ ‘ಎಕೋ ಥೀಮ್ ಪಾರ್ಕ್’ನ್ನು 8.10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಈಗಾಗಲೇ ಕ್ರಮವಹಿಸಲಾಗಿದ್ದು,ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಹಾಗೂ ಆರ್ಥಿಕ ಬಿಡ್ಡ  ನ್ನು   ಸಹ ತೆರೆಯಲಾಗಿದೆ. ಸದ್ಯದಲ್ಲೆ  ಎಕೋ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ.  ಸ್ವಯಂ ಚಾಲಿತ ಪರಿಸರ ಸ್ನೇಹಿ ಉದ್ಯಾನವನ ಪ್ರವಾಸಿಗರ ಮನಸೆಳೆಯುವ ಹಲವು ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಮಾದರಿಗಳು ಈ ಪಾರ್ಕ್ ನಲ್ಲಿ ಮೈತಳೆಯಲಿವೆ.ಈ ಉದ್ಯಾನವನದಲ್ಲಿ ಸರಳ ಜಿಮ್, ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಅನುಕೂಲಗಳು, ಹಿರಿಯ ನಾಗರಿಕರ ವಿಶ್ರಾಂತಿ ಸ್ಥಳ, ಸಂಗೀತ ಕಾರಂಜಿ, ಬೋಟಿಂಗ್, ಕಲಾಗ್ರಾಮದ ಮಳಿಗೆಗಳು, ಪಾದಾಚಾರಿ ಸೇತುವೆ, ವನೌಷಧಿ ಸಸ್ಯಗಳು ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಈ ಪಾರ್ಕ್ ನ ಯಾವುದೇ ಸ್ಥಳದಲ್ಲಿ ಕೂತರೂ ಸುಶ್ರಾವ್ಯ ಸಂಗೀತದ ನಾದ ಕೇಳುವಂತೆ  ನಿರ್ಮಾಣ ಮಾಡುತ್ತಿರುವುದು  ಈ ಪಾರ್ಕ್ ವಿಶೇಷತೆಯಾಗಲಿದೆ  ಒಟ್ಟಾರೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಶ್ರೀನಿವಾಸಾಗರ ಪಾರ್ಕ್ ನಿರ್ಮಾಣಕ್ಕೆ ಡಿಪಿಆರ್: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ  ಪುಣ್ಯ ಕ್ಷೇತ್ರ  ಶ್ರೀನಿವಾಸಾಗರದ ಬಳಿ  ಪಾರ್ಕ್ ನಿರ್ಮಾಣ ಮಾಡಿ  ಪ್ರವಾಸಿಗರ ಮನಸೆಳೆಯುವ ಪ್ರವಾಸಿ ತಾಣ ಮಾಡಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ರಂಗಸ್ಥಳದಲ್ಲಿ 21ಎಕರೆ ಜಾಗದಲ್ಲಿ ಪ್ರವಾಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ.ಸದ್ಯದಲ್ಲೇ ಅನುಮೋದನೆಯೂ ದೊರಕಲಿದೆ ಇದಲ್ಲದೇ ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಯೂ ವಿವಿಧ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಹಾಗೂ ಚಿತ್ರಕಲಾ ಶಿಕ್ಷಕರು ಮತ್ತು ಚಿತ್ರಕಲಾ ಪರಿಷತ್ತಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!