ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 12 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 16 ಕರೊನಾ ಪ್ರಕರಣಗಳು ವರದಿಯಾಗಿದ್ದು, ನೆಲಮಂಗಲ ತಾಲೂಕಿನ ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 03 ಪುರುಷರು, 05 ಮಹಿಳೆಯರು ಸೇರಿ 08. ಹೊಸಕೋಟೆ 03 ಪುರುಷರು, 03 ಮಹಿಳೆಯರು ಸೇರಿ 06. ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ತಲಾ ಇಬ್ಬರು ಪುರುಷರು ಸೇರಿ ಜಿಲ್ಲೆಯಲ್ಲಿ ಒಟ್ಟು 16 ಮಂದಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ನೆಲಮಂಗಲ ತಾಲೂಕಿನ 50 ವರ್ಷದ ಸೋಂಕಿತ ಮಹಿಳೆ ಸಾವನಪ್ಪಿದ್ದಾರೆ ಎಂದು ಬುಲೆಟಿನ್ ವರದಿ ತಿಳಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ 125 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 172ಕ್ಕೆ ಏರಿಕೆಯಾಗಿದೆ.
ಉಳಿದಂತೆ ಜಿಲ್ಲೆಯ 2128 ಮಂದಿಯನ್ನು ಕಡ್ಡಾಯ ಗೃಹ ಬಂದನದಲ್ಲಿ ಇಡಲಾಗಿದ್ದು,
ಇಂದಿನ ವರದಿಯ ಪ್ರಕಾರ 1792 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……