ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2021”ರ ಸಮಾರಂಭವನ್ನು ಅಕ್ಟೋಬರ್ 01 ರಂದು ಬೆಳಿಗ್ಗೆ 10 ಗಂಟೆಗೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ) ಅವರು ಸಮಾರಂಭವನ್ನು ಉದ್ಘಾಟಿಸಿಸಲಿದ್ದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣ ಸ್ವಾಮಿ.ಎಲ್.ಎನ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ನೆಲಮಂಗಲ
ವಿಧಾನಸಭಾ ಕ್ಷೇತ್ರದ ಶಾಸಕಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‍ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಸರ್ಕಾರದ ಕಾರ್ಯದರ್ಶಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾದ ಪಿ.ಹೇಮಲತಾ ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಪ್ರಗತಿಪರ ಸಂಘಟನೆಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ಅನಿತಾಲಕ್ಷ್ಮೀ ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……