ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಕಲಂ 25 ರ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‘ಸಿ’ ಪ್ರವರ್ಗದ 5 ಅಧಿಸೂಚಿತ ದೇವಾಲಯಗಳಿಗೆ ಮೂರು ವರ್ಷಗಳ ಅವಧಿಗೆ 9 ಜನ ಸದಸ್ಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾಧಿಗಳು / ಸಾರ್ವಜನಿಕರಿಂದ ಆಹ್ವಾನಿಸಲಾಗಿದೆ.
ಪ್ರವರ್ಗ ‘ಸಿ’ ದೇವಾಲಯಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯ, ಕಸಬಾ ಹೋಬಳಿಯ ರಾಜಘಟ್ಟ (ಅಮಾನಿಕೆರೆ)ದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಕಾರಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯ, ವಿಜಯಪುರ ಟೌನ್ ನ ಕೋಟೆ ಬೀದಿಯ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ(ಹೊಸ ಸೇರ್ಪಡೆ), ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಈಸ್ತೂರಿನಲ್ಲಿರುವ ಶ್ರೀ ಚನ್ನರಾಯಸ್ವಾಮಿ ದೇವಾಲಯ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ 2011ರ ಕಲಂ 25ರನ್ವಯ ಮೇಲ್ಕಂಡ ‘ಸಿ’ ಪ್ರವರ್ಗದ 05 ಅಧಿಸೂಚಿತ ದೇವಾಲಯಗಳ ಪೈಕಿ 4 ಅಧಿಸೂಚಿತ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸಲು ನಿಗದಿತ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ ಹಾಗೂ ಹೊಸದಾಗಿ ಪ್ರಕಟಣೆ ಹೊರಡಿಸಬೇಕಾಗಿರುವ ಒಂದು ದೇವಾಲಯ ಸೇರಿ ಒಟ್ಟು 5 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತಾಧಿಗಳಿಂದ ಹೊಸದಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ಶಾಖೆಯಲ್ಲಿ, ಸಂಬಂಧಿಸಿದ ತಹಶೀಲ್ದಾರ್ ಕಚೇರಿಯ ಮುಜರಾಯಿ ಶಾಖೆಯಲ್ಲಿ ಮತ್ತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಚೇರಿಯಲ್ಲಿ ಪಡೆಯಬಹುದಾಗಿದೆ.
ಈ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗೆ ಕನಿಷ್ಟ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾಧಿಗಳು/ ಸಾರ್ವಜನಿಕರು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-1 (ಬಿ) (22ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ 2021ರ ಅಕ್ಟೋಬರ್ 26ರೊಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ 05, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್‌ನ ಪದನಿಮಿತ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……