ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಭೂ ಪರಿವರ್ತನೆ ಇಲ್ಲದೇ, ಭೂ ಪರಿವರ್ತನೆಯಾದ ನಂತರ ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಬಡಾವಣೆಗಳನ್ನು ನಿರ್ಮಿಸುತ್ತಿರುವುದರಿಂದ ಸಾರ್ವಜನಿಕರು ತೀರಾ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆ, ಇನ್ನೂ ಮುಂದೆ ಯಾವುದೇ ನಿವೇಶನಗಳ ನೋಂದಣಿ ಸಂದರ್ಭದಲ್ಲಿ ಸಂಬಂಧಿಸಿದ ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸಿ, ನೋಂದಣಿ ಮಾಡಬೇಕೆಂದು ಉಪ ನೋಂದಣಾಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದ್ದಾರೆ.
ಭೂ ಪರಿವರ್ತನೆ ಆದೇಶದ ದೃಢೀಕೃತ ಪ್ರತಿಗಳು, ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಪಡೆದ ಅನುಮೋದಿತ ನಕ್ಷೆ ಪ್ರತಿ, ರೇರಾ ಪ್ರಾಧಿಕಾರದ ರಚನೆ ನಂತರ ರೇರಾ ಪ್ರಾಧಿಕಾರದಿಂದ ಅನುಮೋದಿತ ದಾಖಲೆಗಳು, ಸಂಬಂಧಿಸಿದ ಪ್ರಾಧಿಕಾರ(ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ) ಗಳಿಂದ ಇ-ಖಾತೆಯಾಗಿರುವ ಬಗ್ಗೆ ದಾಖಲಾತಿಗಳನ್ನು ಪರಿಶೀಲನೆ ಮಾಡದೆ, ನೋಂದಣಿ ಮಾಡಿದ್ದಲ್ಲಿ ಹಾಗೂ ಸರ್ಕಾರದ ಆದೇಶಗಳನ್ನು ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿ ಅಕ್ರಮ ಬಡಾವಣೆಗಳ ನಿವೇಶನಗಳನ್ನು ನೋಂದಣಿ ಮಾಡಿದ್ದಲ್ಲಿ, ಸಂಬಂಧಿಸಿದ ಉಪ ನೋಂದಣಾಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನಿನ್ವಯ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……