ವಿಶ್ವ ರೇಬಿಸ್ ದಿನಾಚರಣೆ: ದೊಡ್ಡಬಳ್ಳಾಪುರದಲ್ಲಿ ಸಾಕು ಪ್ರಾಣಿಗಳಿಗೆ ಉಚಿತ ರೇಬಿಸ್ ಲಸಿಕೆ

ದೊಡ್ಡಬಳ್ಳಾಪುರ: ತಾಲೂಕು ಪಶುಪಾಲನಾ ಮತ್ತು ಪಶು ವ್ಯೆದ್ಯಾಸೇವಾ ಇಲಾಖೆ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಸಹಯೋಗದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣದ ಬಳಿಯಿರುವ ಪಶು ಆಸ್ಪತ್ರೆ ಆವರಣದಲ್ಲಿ ಸಾಕು ಪ್ರಾಣಿ ಮಾಲೀಕರಿಗೆ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಶ್ವಾನಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೆಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಶುಪಾಲನಾ  ಮತ್ತು ಪಶು ವ್ಯೆದ್ಯಾಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜ್ ಮಾತನಾಡಿ, ಪ್ರತಿವರ್ಷ ಸೆ. 28 ರಂದು ರೇಬಿಸ್ ಸೋಂಕಿನ ಬಗ್ಗೆ ವಿಶ್ವದಾದ್ಯಂತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ರೇಬಿಸ್ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಸಾಕು ಪ್ರಾಣಿಗಳ ಕಡಿತದಿಂದಾಗಿ ಅದರಲ್ಲೂ ಹುಚ್ಚುನಾಯಿ ಕಡಿತದಿಂದಾಗಿಯೇ ಬರುವಂತಹ ರೇಬಿಸ್ ಕಾಯಿಲೆಯಿಂದ ಜಗತ್ತಿನಾದ್ಯಂತ ಬಹಳಷ್ಟು ಮಂದಿ ಸಾವನಪ್ಪಿತ್ತಿದ್ದಾರೆ. ಈ ದಿಸೆಯಲ್ಲಿ ಇಂದು ರಾಜ್ಯಾದ್ಯಂತ ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ರೇಬಿಸ್ ಲಸಿಕೆ ಹಾಕಲಾಗುತ್ತಿದ್ದು, ಶ್ವಾನಗಳು ಸೇರಿದಂತೆ ಸಾಕು ಪ್ರಾಣಿಗಳಿಗೆ ರೇಬಿಸ್ ಲಸಿಕೆ ಹಾಕಿಸುವ ಮೂಲಕ ಮುಂಜಾಗ್ರತೆ ವಹಿಸಬೇಕಿದೆ ಎಂದರು.

ಪಶುಪಾಲನಾ ಮತ್ತು ಪಶುವ್ಯೆದ್ಯಾಸೇವಾ ಇಲಾಖೆ  ತಾಲೂಕು ಸಹಾಯಕ ನಿರ್ದೇಶಕ ಡಾ.ಎಂ.ಅಂಜನಪ್ಪ ಮಾತನಾಡಿ, ರೇಬಿಸ್‍ಗೆ ಮೊದಲು ಲಸಿಕೆ ಕಂಡುಹಿಡಿದ ಲೂಯಿ ಪಾಶ್ಚರ್ ಮರಣ ಹೊಂದಿದ ದಿನವನ್ನು 2007ರಿಂದ ವಿಶ್ವ ರೇಬಿಸ್ ದಿನವೆಂದು ಆಚರಿಸಲಾಗುತ್ತಿದ್ದು, ವಿಶ್ವದಾದ್ಯಂತ ರೇಬಿಸ್ ಕುರಿತು ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಮೂಲ ಆಶಯವಾಗಿದೆ. ರೇಬೀಸ್ ವಾಸ್ತವಾಂಶಗಳು ತಿಳಿದಿರಲಿ, ಭಯ ಬೇಡ ಎನ್ನುವುದು ಈ ವರ್ಷದ ಧ್ಯೇಯ ವಾಕ್ಯವಾಗಿದ್ದು, ರೇಬಿಸ್ ಕುರಿತಂತೆ ಅರಿವು ಮೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಪಶು ವೈದ್ಯರಾದ ಡಾ.ವಿಶ್ವನಾಥ್, ಡಾ.ಮಂಜುನಾಥ್ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!