2020 ಮತ್ತು 2021 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ” ಪ್ರಕಟ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು  ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2020 ಮತ್ತು 2021 ನೇ ಸಾಲಿಗೆ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕೋವಿಡ್- 19ರ ಹಿನ್ನಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸರಕಾರವು ಸದರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಇಚ್ಚಿಸಿದ್ದು, ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಅಶೋಕ್ ಬಂಗಾರೆಪ್ಪ್ಪಾ ಹಿಂಚಿಗೇರಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ಆಯ್ಕೆ ಸಮಿತಿಯು 2020 ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ “ಶ್ರೀಮತಿ ಮೀರಾಬಾಯಿ ಕೊಪ್ಪಿಕರ್” ಮತ್ತು 2021 ನೇ ಸಾಲಿಗೆ  “ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠ”ವನ್ನು ಪ್ರಶಸ್ತಿಗೆ ಆಯ್ಕೆಮಾಡಿರುತ್ತದೆ.

ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ ರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುವುದು.  

ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ: “ನಡೆದಾಡುವ ದೇವರು” ಎಂದೇ ಖ್ಯಾತರಾದ ಪರಮಪೂಜ್ಯ ಡಾ: ಶಿವಕುಮಾರ ಸ್ವಾಮೀಜಿಯವರ ಮಹದಾಶಯದಂತೆ ಸತತವಾಗಿ 80 ವರ್ಷಗಳ ಕಾಲ ಅನ್ನದಾಸೋಹ ಹಾಗೂ ಅಕ್ಷರ ದಾಸೋಹದ ತವರಾಗಿ ಜಾತಿ-ಧರ್ಮ ಬೇಧವಿಲ್ಲದೇ, ಪ್ರಾಂತ್ಯ-ಪ್ರದೇಶ ತಾರತಮ್ಯ ಮಾಡದೇ ಲಕ್ಷಾಂತರ ಮಕ್ಕಳಿಗೆ ಅನ್ನ, ಆಶ್ರಯ ಮತ್ತು ವಿದ್ಯೆಯನ್ನು ದಾನ ಮಾಡಿದ, ರಾಷ್ಟ್ರದಲ್ಲೇ ಪ್ರತಿಷ್ಠಿತ ಸಂಸ್ಥೆ ಎಂದು ಹೆಸರಾದ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ, ಕ್ಯಾತಸಂದ್ರ, ತುಮಕೂರು, ಸಾಧನೆಗಳ ತವರು.

ಮೀರಾಬಾಯಿ ಕೊಪ್ಪಿಕರ್:  ಮೀರಾಬಾಯಿ ಕೊಪ್ಪಿಕರ್, ಹುಬ್ಬಳ್ಳಿಯ ಅತ್ಯಂತ ಶ್ರೀಮಂತರಾಗಿದ್ದ ಕೊಪ್ಪಿಕರ ವಂಶದ ಕುಡಿ. ಸದ್ಯ ಇವರಿಗೆ 96 ವರ್ಷ.  ಸದ್ಯ ಮುಧೋಳದಲ್ಲಿರುವ ವಾತ್ಸಲ್ಯ ಧಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಪಕ್ಕಾ ಗಾಂಧಿವಾದಿಯಾಗಿದ್ದ ಇವರು ಇತ್ತೀಚಿನವರೆಗೂ ತಾವೇ ನೂಲು ನೇಯ್ದು ಅದರಲ್ಲಿ ವಸ್ತ್ರವನ್ನು ಮಾಡಿಕೊಳ್ಳುತ್ತಿದ್ದರು. ಈಗ ವಯಸ್ಸಾದ ನಿಮಿತ್ತ ನೇಯ್ಗೆ ಮಾಡುತ್ತಿಲ್ಲ.

ಗಾಂಧಿವಾದಿಗಳಾಗಿದ್ದ ಮೀರಾಬಾಯಿ ಕೊಪ್ಪಿಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು.  ಸಬರಮತಿ ಆಶ್ರಮದಲ್ಲಿ ಇದ್ದರು. ವಿನೋಬಾ ಭಾವೆಯವರ ಜೊತೆಗೂಡಿ ಭೂದಾನ ಚಳವಳಿಯಲ್ಲಿ ಪಾಲ್ಗೊಂಡು, ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿಯನ್ನು ದಾನ ಮಾಡಿಸುವಲ್ಲಿ ಯಶಸ್ವಿಯಾದವರು.

ಯಾರಿಂದಲೂ ಏನನ್ನೂ ಅಪೇಕ್ಷೆ ಇಲ್ಲ. ಇವರ ಮೂಲ ಧ್ಯೇಯ “ಸಮಾಜಕ್ಕೆ ಏನನ್ನಾದರೂ ಕೊಡಬೇಕು.  ಏನನ್ನೂ ಬಯಸಬಾರದು” ಎಂಬುದು.  ಸಾವಯವ ಕೃಷಿ ಮಾಡುತ್ತಿದ್ದ ಇವರು ತಾವೇ ಬೆಳೆದ ವಸ್ತುಗಳನ್ನು ಮಾರಿ ಅದರಲ್ಲಿ ಬಂದ ಆದಾಯದಿಂದ ಜೀವನ ಮಾಡುತ್ತಿದ್ದಾರೆ.

“ವಾತ್ಸಲ್ಯ ಧಾಮ” ವಿನೋಬಾ ಭಾವೆಯವರ ತಾಯಿ ಮೂಲ ಜಮಖಂಡಿಯವರಾದ ರುಕ್ಮಿಣಿ ಭಾವೆಯವರದ್ದು. ಮುಧೋಳಲ್ಲಿ ಅವರು 2.5 ಎಕರೆ ಜಾಗವನ್ನು ಕೊಂಡು ಅದರಲ್ಲಿ ಆಶ್ರಮ ನಿರ್ಮಿಸಲಾಗಿದೆ.  ಆರಂಭದಲ್ಲಿ 20 ಜನರಿದ್ದರು.  ಈಗ ಮೂರು ಜನರಷ್ಟೇ ವಾಸ ಮಾಡುತ್ತಾರೆ. ಮೀರಾಬಾಯಿ ಕೊಪ್ಪಿಕರ್ ಅವರನ್ನು ಸಂದರ್ಶಿಸಲು ಅತಿಥಿಗಳು ಆಗಾಗ್ಗೆ ಬರುತ್ತಿರುತ್ತಾರೆ.  ಜಾತ್ಯಾತೀತ ಮನೋಭಾವದವರಾಗಿದ್ದಾರೆ.

2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.  ಪ್ರಶಸ್ತಿಯನ್ನು ಇವರಿಗೆ ಕೊಡಲು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಶ್ರಮಕ್ಕೆ ಆಗಮಿಸಿ, ಚೆಕ್ ಹಾಗೂ ಮೂರು ಗ್ರಾಂ ಬಂಗಾರದ ಪದಕವನ್ನು ಕೊಟ್ಟಿದ್ದರು.  ಅವರು ನೀಡಿ ಚೆಕ್ ಹಣ ಇನ್ನೂ ಬ್ಯಾಂಕ್‍ನಲ್ಲಿದ್ದು, ಅದನ್ನು ಜನತೆಯ ಕಲ್ಯಾಣಕ್ಕೆ ಬಳಸಲು ಹೇಳಿದ್ದಾರೆ. ಬಂಗಾರದ ಪದಕವನ್ನು ಬಡವರಿಗೆ ದಾನ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!