ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಲಸಿಕಾ ಮೇಳದ ಲಸಿಕಾಕರಣದಲ್ಲಿ ಮತ್ತೊಮ್ಮೆ ಪ್ರಥಮ

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 29ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 40ಸಾವಿರ ಲಸಿಕೆ ಹಾಕಲು  ಸರ್ಕಾರ ಗುರಿ ನಿಗದಿಪಡಿಸಿತ್ತು ಆ ಗುರಿಯಲ್ಲಿ ಶೆ.95 ರಷ್ಟು ಸಾಧನೆ ಮಾಡುವ  ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಲು ಕಾರಣೀಭೂತರಾದ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ  ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಈ ಸಹಕಾರ ಲಸಿಕಾಕರಣ ಶೇ.100ರಷ್ಟು ಪ್ರಗತಿಯಾಗುವವರೆಗೂ ಹೀಗೇಯೇ ಮುಂದುವರಿಯಲಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಜನರಲ್ಲಿ ಮನವಿ ಮಾಡಿದ್ದಾರೆ.

Guarantee scheme
ಎನ್ ವಿಶ್ವನಾಥ್

ಅವರು ಲಸಿಕಾ ಮೇಳದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ಲಸಿಕಾಕರಣದ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಿ ಮಾತನಾಡುತ್ತಾ ,  ಜಿಲ್ಲೆಯಲ್ಲಿ ಈವರೆಗೆ 11,83,467  ಡೋಸ್ ಗಳ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಈ ಪೈಕಿ ಮೊದಲ ಡೋಸ್ ಲಸಿಕೆಯನ್ನ 7,98,771 ಜನರಿಗೆ ನೀಡಲಾಗಿದ್ದು, ಎರಡನೆಯ ಡೋಸನ್ನು 3,84,696ಜನರು ಪಡೆದಿದ್ದಾರೆ .ಲಸಿಕಾ ಮೇಳ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಲ್ಲರೂ ಎರಡೂ ಡೋಸ್ ಲಸಿಕೆ ಪಡೆಯುವವರೆಗೆ ಲಸಿಕಾ ಮೇಳ ಆಗಬೇಕು ಎಂದರು.

ಶೇ.100ರಷ್ಟ ಕ್ಕಿಂತ ಅಧಿಕ ಸಾಧನೆಯ ವಿಶ್ವಾಸ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 30 ರಿಂದ 35ಸಾವಿರ ಲಸಿಕೆ ಹಾಕಲು ಗುರಿ ನಿಗಧಿಪಡಿಸಿಕೊಳ್ಳಲಾಗಿತ್ತು ಆ ಗುರಿಯನ್ನು ಮೀರಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ ತೋರಿಸಿಕೊಟ್ಟಿದ್ದರು ಹಾಗೂ ಸೆ.17 ರಂದು ರಾಷ್ಟ್ರಾದ್ಯಂತ ನಡೆದ ವಿಶೇಷ ಲಸಿಕಾ ಮೇಳದ ಭಾಗವಾಗಿ  ಜಿಲ್ಲೆಯಲ್ಲಿ ಒಂದೇ ದಿನ 88,570 ಜನರಿಗೆ ಲಸಿಕೆ ಹಾಕುವ ಮೂಲಕ  ಲಸಿಕಾಕರಣದಲ್ಲಿ ಈ ಹಿಂದಿನ ದಾಖಲೆಗಳನ್ನು ಮೀರಿದ ಸಾಧನೆ ಜಿಲ್ಲೆ  ಮಾಡಿತ್ತು. ಇಂದಿನ ಮೇಳದಲ್ಲಿಯೂ  ನಿಗದಿತ 40 ಸಾವಿರ ಗುರಿಯಲ್ಲಿ ಈವರೆಗೆ 37,128 ಜನರಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ  ಲಸಿಕಾಕರಣ ಇನ್ನೂ  ಮುಂದುವರಿಯುತ್ತಿದ್ದು ನಿಗದಿತ  ಗುರಿಯನ್ನು  ಮೀರಿದ  ಸಾಧನೆಯನ್ನು  ಇಂದೇ  ಮಾಡುತ್ತೇವೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀರೀಕ್ಷೆಗೂ ಮೀರಿದ ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಮಂಗಳವಾರ ಕೋವಿಡ್-19ರ ಲಸಿಕಾಕರಣ ಪ್ರಗತಿ ಪರಿಶೀಲನೆ  ಹಾಗೂ  ವಿಶೇಷ ಲಸಿಕಾ ಮೇಳ ಆಯೋಜಿಸುವ ಬಗ್ಗೆ ವಿಡಿಯೋ ಸಂವಾದ ಸಭೆ ನಡೆಸಿದ ವೇಳೆ  ನೀಡಿದ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈ ಮಟ್ಟದ ಸಾಧನೆಗೆ ಪ್ರಮುಖ ಕಾರಣವಾಯಿತು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ ,ಜಿಲ್ಲಾಡಳಿದ ಇತರ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು,ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಪಡೆಗಳ ಸದಸ್ಯರು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಆರೋಗ್ಯ ಇಲಾಖೆಗೆ ಉತ್ತಮ ಸಾತ್ ನೀಡಿದ್ದಾರೆ, ಮಾಧ್ಯಮದವರು ವ್ಯಾಪಕ ಪ್ರಚಾರ ನೀಡಿದ್ದಾರೆ ಎಲ್ಲಕ್ಕೂ ಮಿಗಿಲಾಗಿ ಜಿಲ್ಲೆಯ ಜನರು ಅದ್ಭುತ ಸ್ಪಂದನೆ ನೀಡಿದ್ದಾರೆ  ಇದೆಲ್ಲದರ ಪರಿಣಾಮ ಈ ಸಾಧನೆಗೈಯ್ಯಲು ಸಾಧ್ಯವಾಗಿದೆ,ಮುಂದೆಯೂ ನಿಮ್ಮೆಲ್ಲರ  ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ಜನರಲ್ಲಿ ಮನವಿ ಮಾಡಿ ಎಲ್ಲರಿಗೂ ಧನ್ಯವಾದಗಳನ್ನ ಹಾಗೂ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಯನ್ನು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!