ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 12 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಹೊಸದಾಗಿ 09 ಕರೊನಾ ಪ್ರಕರಣಗಳು ವರದಿಯಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ ಓರ್ವ ಪುರುಷ. ಹೊಸಕೋಟೆ ತಾಲೂಕಿನ 03 ಪುರುಷರು. ದೇವನಹಳ್ಳಿ ತಾಲೂಕಿನ 04 ಪುರುಷರು. ದೊಡ್ಡಬಳ್ಳಾಪುರ ತಾಲೂಕಿನ ಓರ್ವ ಮಹಿಳೆ ಸೇರಿ ಜಿಲ್ಲೆಯಲ್ಲಿ ಒಟ್ಟು 09 ಮಂದಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 122 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 166ಕ್ಕೆ ಇಳಿಕೆಯಾಗಿದೆ.
ಉಳಿದಂತೆ ಜಿಲ್ಲೆಯ 2125 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದ್ದು,
ಇಂದಿನ ವರದಿ ಅನ್ವಯ 1976 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……