ದೊಡ್ಡಬಳ್ಳಾಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮವು ನಡೆಯತ್ತಿದ್ದು. ಹೊಸ ಮತದಾರರ ಸೇರ್ಪಡೆ, ಪರಿಶೀಲನೆ ಮತ್ತು ದೃಢೀಕರಣ, ಮತದಾರರ ಪಟ್ಟಿಯಲ್ಲಿತಿದ್ದುಪಡಿ ಮುಂತಾದವುಗಳನ್ನು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈಗಾಗಲೇ ಚುನಾವಣಾ ಆಯೋಗದಿಂದ ಮತದಾರರ ಸಹಾಯವಾಣಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಮತದಾರರು ಮತದಾರರ ಸಹಾಯವಾಣಿ ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸಿ ಧೃಡೀಕರಿಸಬಹುದು ಎಂದವರು ಹೇಳಿದ್ದಾರೆ.
ಮತದಾರರು ತಮ್ಮ ಮೊಬೈಲ್ ನ Google play store ನಲ್ಲಿ ಭಾರತ ಚುನಾವಣೆ ಆಯೋಗ ಹೊಸದಾಗಿ ಸಿದ್ದಪಡಿಸಿರುವ Voter Helpline App (VHA)ನ್ನು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……