ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ತಾಲ್ಲೂಕುವಾರು ಒಂದು ದಿನದ ಜಾನಪದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, 15-35 ವರ್ಷ ವಯೋಮಿತಿಯುಳ್ಳ ಆಸಕ್ತ ಯುವಕ-ಯುವತಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು 2021ರ ಅ.05 ಕೊನೆಯ ದಿನವಾಗಿದೆ.
ಹಾಗೆಯೇ, ವಿವಿಧ ಜಾನಪದ ತರಬೇತಿ ಮತ್ತು ಕಾರ್ಯಾಗಾರ, ಯುವ ಸಂಪರ್ಕ ಸಭೆ ಮತ್ತು ಸ್ವಾಮಿ ವಿವೇಕಾನಂದರ ಜಯಂತಿಯ ಕಾರ್ಯಕ್ರಮಗಳನ್ನು ತಾಲ್ಲೂಕುವಾರು/ ಹೋಬಳಿವಾರು ಹಮ್ಮಿಕೊಳ್ಳಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೋಂದಾಯಿತಗೊಂಡ ಯುವಕ-ಯುವತಿ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು 2021ರ ಅಕ್ಟೋಬರ್ 07 ರೊಳಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.ಸಂ.: 9845608598, 9632778567 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……