ದೊಡ್ಡಬಳ್ಳಾಪುರ: ತಾಲೂಕಿನ ಜಿ.ಹೊಸಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹನುಮಯ್ಯ(55 ವರ್ಷ) ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಕೆಲ ತಿಂಗಳ ಹಿಂದೆ ನಗರದ ಕುರುಬರಹಳ್ಳಿ ರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಹನುಮಯ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಅಂತ್ಯಕ್ರಿಯೆ ಮುತ್ತುಗದಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……