ದೊಡ್ಡಬಳ್ಳಾಪುರ: ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ವ್ಯಾಪಿಸಿದ ಪರಿಣಾಮ, ಮೂರು ಮನೆಗಳ ಶೀಟುಗಳು ಹಾರಿಹೋಗಿ, ಬೆಂಕಿ ತಗುಲಿ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಬಿಹಾರ ಮೂಲದ ಕಾರ್ಮಿಕ ಕುಟುಂಬವೊಂದು, ಶುಕ್ರವಾರ ರಾತ್ರಿ ಮಲಗು ಸಂದರ್ಭದಲ್ಲಿ ಅಡುಗೆ ಅನಿಲವನ್ನು ಸಮರ್ಪಕವಾಗಿ ನಿಲ್ಲಿಸದೆ ಇರುವುದು ಘಟನೆ ಕಾರಣ ಎನ್ನಲಾಗಿದೆ.
ರಾತ್ರಿ ಮನೆಯೊಳಗೆ ಹರಡಿದ ಅನಿಲ ಬೆಳಗ್ಗೆ ಬಾಗಿಲು ತೆರೆಯುತ್ತಿದ್ದಂತೆ ಮನೆಯ ಮುಂದೆ ಕಸಕ್ಕೆ ಹಚ್ಚಿದ್ದ ಬೆಂಕಿ ವ್ಯಾಪಿಸಿ ಸ್ಪೋಟಗೊಂಡಿದ್ದು, ಸಾಲು ಮನೆಗಳಲ್ಲಿ ಮೂರು ಮನೆಗಳ ಶೀಟ್ ಹಾರಿ ಹೋಗಿವೆ.
ಘಟನೆಯಲ್ಲಿ ಬಿಹಾರ ಮೂಲದ ಒಂದು ಮಗು ಹಾಗೂ ಇಬ್ಬರು ಗಂಡಸರು, ಇಬ್ಬರು ಹೆಂಗಸರಿಗೆ ಗಾಯಗಳಾಗಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….