ದೊಡ್ಡಬಳ್ಳಾಪುರ: ಮಹಾತ್ಮ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ನಗರದ ಜೆಡಿಎಸ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಶನಿವಾರ ಬೆಳಿಗ್ಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ. ಗಾಂಧೀಜಿಯವರ ಅಹಿಂಸಾ ತತ್ವಗಳನ್ನು ಪಾಲಿಸಬೇಕಿದೆ. ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿಯವರು ತಮ್ಮ ಸರಳ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು ಇತರೆ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು.
ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ಕೂಡ ದೇಶದ ಪ್ರಗತಿಗೆ ಶ್ರಮಿಸಿದರು ಎಂದು ಬಿ.ಮುನೇಗೌಡ ಸ್ಮರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ತ.ನಾ.ಪ್ರಭುದೇವ್, ನಗರ ಆದ್ಯಕ್ಷ ವಿ.ಎಸ್. ರವಿಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ನಗರಸಭೆ ಮಾಜಿ ಸದಸ್ಯ ಜಿ.ಸತ್ಯನಾರಾಯಣ್, ಟಿಎಪಿಎಂಸಿಎಸ್ ಸದಸ್ಯ ಲಕ್ಷ್ಮೀನಾರಾಯಣ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..