ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅ.1ರ ಶುಕ್ರವಾರ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು.
ಅರಮನೆ ಆವರಣದಲ್ಲಿ ಅಭಿಮನ್ಯು ಆನೆಗೆ ಮರಳು ಮೂಟೆ ಹೊರಿಸಿ ಅದರ ಮೇಲೆ ಕಟ್ಟಿದ್ದ ಮರದ ಅಂಬಾರಿಗೆ ಪೂಜೆ ಸಲ್ಲಿಸಿದ ಬಳಿಕ ಅಂತಿಮ ಹಂತದ ತಾಲೀಮು ಆರಂಭವಾಯಿತು.
ಅಭಿಮನ್ಯು ಜೊತೆ ಕಾವೇರಿ, ಲಕ್ಷ್ಮಿ, ಚೈತ್ರಾ, ಗೋಪಾಲಸ್ವಾಮಿ, ಧನಂಜಯ, ವಿಕ್ರಮ, ಅಶ್ವತ್ಥಾಮ ಆನೆಗಳು ಹೆಜ್ಜೆ ಹಾಕಿದವು.
ಅ.7 ರಿಂದ13ರವರೆಗೆ ನಿತ್ಯ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ: ಅ.7ರಿಂದ 13ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಜೆ 6 ರಿಂದ 9ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೈಸೂರು ನಗರದ ಎಲ್ಲಾ ಪ್ರವೇಶದ್ವಾರಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಪರಿಸರ ಸ್ನೇಹಿ ಎಲ್ ಇಡಿ ಬಳಕೆ ಮಾಡಲಾಗುತ್ತದೆ. 100 ಕಿ.ಮೀ.ನಷ್ಟು ದೀಪಾಲಂಕಾರ ಮಾಡಲಾಗುವುದು. 41 ಸರ್ಕಲ್‍ಗಳಲ್ಲಿ ಅಂಬಾರಿ, ವಿಧಾನಸೌಧ, ಕೆಆರ್‍ಎಸ್ ಪ್ರತಿಕೃತಿಗಳ ದೀಪಾಲಂಕಾರ ಮಾಡಲಾಗುತ್ತದೆ. ಇನ್ನೆರಡು ದಿನದಲ್ಲಿ ದೀಪಾಲಂಕಾರ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.
ಅ.6ರಂದು ಸಂಜೆ 6 ಗಂಟೆಗೆ ದೀಪಾಲಂಕಾರಗಳ ಉದ್ಘಾಟನೆಯಾಗಲಿದೆ. ಅಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ದೀಪಾಲಂಕಾರಗಳನ್ನು ವೀಕ್ಷಿಸಲಿದ್ದಾರೆ. ರಾತ್ರಿ 10 ಗಂಟೆಯವರೆಗೆ ದೀಪಾಲಂಕಾರ ಇರಲಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಗೆ ಆಗಮಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸಚಿವ ಸೋಮಶೇಖರ್ ಅವರು ಧನ್ಯವಾದ ತಿಳಿಸಿದರು. ಸಭೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಶಾಸಕ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….