ಬೆಂ.ಗ್ರಾ.ಜಿಲ್ಲೆ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 153ನೇ ಜನ್ಮ ದಿನಾಚರಣೆ ಹಾಗೂ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 118ನೇ ಜನ್ಮ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.”ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ” ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ನಾಗರಾಜ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಸವಿತ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ. ಜೆ, ಜಿಲ್ಲಾ ಬಾಲಕಾರ್ಮಿಕ ಸೊಸೈಟಿ ಯೋಜನಾ ನಿರ್ದೇಶಕ ಎಸ್.ಸುಬ್ಬರಾವ್, ಜೆ.ಹೆಚ್.ಎಂ. ಗಂಗಾಧರಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..