ಸ್ವಾತಂತ್ರ್ಯಕ್ಕೆ ಅಹಿಂಸಾ ಮಾರ್ಗವೇ ಶ್ರೇಷ್ಠವೆಂದು ನಂಬಿದ್ದವರು ಗಾಂಧೀಜಿ: ಗ್ರಾಪಂ ಅಧ್ಯಕ್ಷ ಎಚ್.‌ಜೆ.ಸಂದೇಶ್

ದೊಡ್ಡಬಳ್ಳಾಪುರ: ಭಾರತ ಬ್ರಿಟೀಷರ ದಾಸ್ಯದಿಂದ ಬಿಡುಗಡೆ ಹೊಂದಿ, ಸ್ವಾತಂತ್ರ್ಯ ಪಡೆಯುವಂತಾಗಲು ಅಹಿಂಸಾ ಮಾರ್ಗವೇ ಶ್ರೇಷ್ಠವೆಂದು ನಂಬಿ, ಅದರಂತೆಯೇ ಕಾರ್ಯರೂಪಕ್ಕೆ ತಂದು ಸ್ವಾತಂತ್ರ್ಯ ದೊರಕಿಸಿಕೊಟ್ಟವರು ಮಹಾತ್ಮಾ ಗಾಂಧೀಜಿಯವರು ಎಂದು ಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷ ಎಚ್.‌ಜೆ.ಸಂದೇಶ್ ಹೇಳಿದರು.

ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಆವರಣದಲ್ಲಿ ಶನಿವಾರದಂದು ಏರ್ಪಡಿಸಲಾದ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಹಾಗೂ ವಿಶೇಷ ಗ್ರಾಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯವರು ಅಹಿಂಸಾ ತತ್ವವನ್ನು ಅನುಸರಿಸುವುದೇ ಶ್ರೇಷ್ಠ ಮಾರ್ಗವೆಂದು ನಂಬಿ, ಅದನ್ನು ಮೈಗೂಡಿಸಿಕೊಂಡು, ಅದರಂತೆಯೇ ನಡೆದು, ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಇಂತಹ ಮಹಾನ್ ಚೇತನವನ್ನು ಸ್ಮರಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದರು.

ಹಿರಿಯ ಮುಖಂಡರಾದ ತಿ.ರಂಗರಾಜು, ಬಿ.ಎಚ್.ಕೆಂಪಣ್ಣ ಮಾತನಾಡಿ, ಗಾಂಧೀಜಿಯವರು ಲಂಡನ್‌ನಲ್ಲಿ ಕಾನೂನು ಪದವಿ ಪಡೆದು, ಆಫ್ರಿಕಾದಲ್ಲಿ ವಕೀಲಿ ವೃತ್ತಿ ಮುಂದುವರಿಸಿ, ಬಳಿಕ ಭಾರತಕ್ಕೆ ಬಂದ ಸಂದರ್ಭದಲ್ಲಿ, ದೇಶವು ಆಗಲೆ ಬ್ರಿಟೀಷರ ಕಪಿಮುಷ್ಟಿಯಲ್ಲಿ ಸಿಲುಕಿ ನರಳುತ್ತಿತ್ತು. ಸುಮಾರು 5೦೦ ಕ್ಕೂ ಹೆಚ್ಚು ರಾಜ ಸಂಸ್ಥಾನಗಳು ಎಷ್ಟೇ ಪ್ರಯತ್ನಿಸಿದರೂ ಬ್ರಿಟೀಷರನ್ನು ಮಣಿಸಲು ಆಗಲಿಲ್ಲ. ಖ್ಯಾತ ಚಿಂತಕ, ಲೇಖಕ ಲಿಯೋ ಟಾಲ್‌ಸ್ಟಾಯ್ ಅವರ ವಾರ್ ಅಂಡ್ ಪೀಸ್ ಎಂಬ ಕೃತಿಯೇ ಗಾಂಧೀಜಿಯವರ ಅಹಿಂಸಾ ಹೋರಾಟಕ್ಕೆ ಪ್ರೇರಣೆಯಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಸತ್ಯ, ಅಹಿಂಸೆ, ಉಪವಾಸ ಚಳುವಳಿಗಳೇ ಗಾಂಧೀಜಿಯವರಿಗೆ ಪ್ರಬಲ ಅಸ್ತ್ರವಾಗಿದ್ದವು.  ಸ್ವದೇಶಿ ವಸ್ತುಗಳ ಬಳಕೆಯಿಂದಲೇ ದೇಶ ಸ್ವಾವಲಂಬಿಯಾಗಲು ಸಾದ್ಯ ಎಂದು ಪ್ರತಿಪಾದಿಸಿದ್ದ ಗಾಂಧೀಜಿಯವರು, ಗ್ರಾಮೀಣ ಪ್ರದೇಶಗಳಲ್ಲಿಯೇ ದೇಶದ ಉನ್ನತಿ ಹಾಗೂ ಅಭಿವೃದ್ಧಿ ಅಡಗಿದೆ ಎಂದು ಸಾರಿದ್ದರು. 

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನೂ ಕೂಡ ಅತ್ಯಂತ ಹೆಮ್ಮೆಯಿಂದ ಇಡೀ ದೇಶ ಇಂದು ಆಚರಿಸುತ್ತಿದೆ.  ದೇಶದ ಅಭಿವೃದ್ಧಿಗೆ ಶಾಸ್ತ್ರಿಜಿ ಅವರ ಕೊಡುಗೆ ಅಪಾರವಾಗಿದ್ದು, ಅವರು ದೇಶಕ್ಕೆ ನೀಡಿದ ‘ಜೈ ಜವಾನ್, ಜೈ ಕಿಸಾನ್’ ಕರೆ ದೇಶವನ್ನು ಸ್ವಾವಲಂಬಿಯಾಗಿಸಲು ಪ್ರೇರಣೆಯಾಯಿತು.  ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ದ ಶಾಸ್ತ್ರಿಜಿಯವರು, ಅಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದರು. ಅವರ ಸರಳತೆ ಹಾಗೂ ಸಜ್ಜನಿಕೆ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ.  ಇಂತಹ ಮಹಾನ್ ನಾಯಕರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆದು, ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಗ್ರಾಮಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಶ್ರಮಧಾನ ಮಾಡಿದರು. ಹಾಗೂ ಗ್ರಾಪಂ ಸ್ವಚ್ಛತಾ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಈ ವೇಳೆ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ, ಪಿಡಿಒ ರವೀಂದ್ರ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!