ದೊಡ್ಡಬಳ್ಳಾಪುರ: ನಗರದ ಬಾಲಕೀಯರ ಮೇಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ನಾಗಲಾಂಬಿಕಾದೇವಿ, ಆಯುಕ್ತ ರವಿಕುಮಾರ್ ಅವರು ವಿದ್ಯಾರ್ಥಿ ನಿಲಯದಲ್ಲಿನ ಸ್ವಚ್ಛತೆ ಹಾಗೂ ಉತ್ತಮ ಪರಿಸರ ವೀಕ್ಷಣೆ ಮಾಡಿ ಮೆಚ್ಚುಗೆ ಸೂಚಿಸಿದರು.
ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಸಮಾಜ ಕಲ್ಯಾಣ ಸಚಿವ ಕೋಟಾಶ್ರೀನಿವಾಸಪೂಜಾರಿ ಅವರು ಇಲಾಖೆಯ ಎಲ್ಲಾ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಸ್ವಚ್ಛತಾ ಕೆಲಸದಲ್ಲಿ ಭಾಗವಹಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ನಗರದ ಬಾಲಕೀಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ಗಾಂಧೀಜಿ,ಲಾಲ್ ಬಹದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಗರದ ವಿದ್ಯಾರ್ಥಿ ನಿಲಯದಲ್ಲಿ ಉತ್ತರ ಕರ್ನಾಟಕದ ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ವಿದ್ಯಾರ್ಥಿನಿಯರು ಅಭ್ಯಾಸ ಮಾಡುತ್ತಿರುವುದು ಹಾಗೂ ವಿದ್ಯಾರ್ಥಿ ನಿಲಯದಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಉತ್ತೀರ್ಣರಾಗಿರುವ ಬಗ್ಗೆ ಮಾಹಿತಿ ಪಡೆದರು.
ಕಟ್ಟಡ ಕಾರ್ಮಿಕರಾಗಿ ಈ ಭಾಗದಲ್ಲಿ ಕೆಲಸ ಮಾಡುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿ ನಿಲಯದ ವಾರ್ಡ್ನ್ ರಾಧಾಮಣಿ ಮಾಹಿತಿ ನೀಡಿದರು.
ವಸತಿ ನಿಲಯಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗುವುದು. ಇಲ್ಲಿನ ಬಾಲಕೀಯರ ವಿದ್ಯಾರ್ಥಿ ನಿಲಯ ಮಾದರಿಯಾಗಿದೆ. ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಮತ್ತು ನಿಲಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದು ಇಲಾಖೆ ಹೆಮ್ಮೆ ಪಡುವ ಸಂಗತಿಯಾಗಿದೆ ಎಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿ ನಾಗಲಾಂಬಿಕಾದೇವಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲಾಣ್ಯ ಇಲಾಖೆ ಜಿಲ್ಲಾ ಉಪ ನಿರ್ದೆಶಕ ಎಸ್.ಕೃಷ್ಣಪ್ಪ, ತಾಲ್ಲೂಕು ಸಹಾಯಕ ನಿರ್ದೆಶಕ ಸೋಮಶೇಖರ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….