ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಸಮುದ್ರ ಮಧ್ಯದಲ್ಲಿ ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆದಿದ್ದು. ಈ ಬಗ್ಗೆ ಸುಳಿವು ಸಿಕ್ಕ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್‌ಸಿಬಿ) ಅಧಿಕಾರಿಗಳು ಹತ್ತು ಮಂದಿಯನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ.
ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಕೂಡಾ ಈ ರೇವ್ ಪಾರ್ಟಿಯಲ್ಲಿದ್ದ ಎನ್ನಲಾಗಿದೆ. ಆರ್ಯನ್ ಖಾನ್ ಸೇರಿ 10 ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರೂ ಹೈ ಪ್ರೊಫೈಲ್ ವ್ಯಕ್ತಿಗಳ ಮಕ್ಕಳು ಎನ್ನಲಾಗಿದೆ.
ಎರಡು ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಕಾರ್ಡೆಲಿಯಾ ಕ್ರೂಸ್ ಲೈನರ್‌ನ “ದಿ ಎಂಪ್ರಸ್’ ಹಡಗಿನೊಳಗೆ ಡ್ರಗ್ಸ್ ಪಾರ್ಟಿ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಈ ಹಡಗು ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆ ಸಮುದ್ರ ತೀರ ಬಿಟ್ಟು ಸ್ವಲ್ಪ ಸಮಯದಲ್ಲೇ ಪಾರ್ಟಿ ಆರಂಭಿಸಲಾಗಿದೆ ಎಂದು ವರದಿಯಾಗಿದೆ.
ಎನ್‌ಸಿಬಿಯ ವಲಯ ನಿರ್ದೇಶಕರಾದ ಸಮೀರ್ ವನ್ಪೆಡೆ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಪಾರ್ಟಿಯ ಸ್ಥಳದಿಂದ ಮಾದಕ ವಸ್ತುಗಳಾದ ಕೊಕೇನ್, ಹಶೀಶ್, ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….