ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಿಟ್ಟನ್ನು ತಾಲೂಕಿನ ಸಕ್ಕರೆಗೊಲ್ಲಹಳ್ಳಿ ವೃದ್ಧೆಗೆ ನೀಡಲಾಯಿತು.
ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.
ಈ ಯೋಜನೆಯ ಅಂಗವಾಗಿ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮದ ಬಡ ವೃದ್ಧೆ ಮುತ್ತಮ್ಮ ಅವರಿಗೆ ಕಿಟ್ ನ್ನು ಧರ್ಮಸ್ಥಳದಿಂದ ಕಳುಹಿಸಿಕೊಡಲಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುಧಾ ಭಾಸ್ಕರ್ ರಾವ್ ವಿತರಿಸಿದರು.
ಈ ವೇಳೆ ಒಕ್ಕೂಟದ ಅಧ್ಯಕ್ಷ ಗಂಗಾಧರ್, ಮೇಲ್ವಿಚಾರಕ ಲೋಕೇಶ್, ಸೇವಾ ಪ್ರತಿನಿಧಿಯಾದ ರೂಪ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….