ದೊಡ್ಡಬಳ್ಳಾಪುರ: ಕೋವಿಡ್ ಸಂಕಷ್ಟದಲ್ಲಿರುವ ಜನರ ನೆರವಿಗೆ ಬರಕಿದ್ದ ಸರ್ಕಾರ ವಿವಿಧ ಕಾರಣಗಳನ್ನು ನೀಡುವ ಮೂಲಕ ತಾಲ್ಲೂಕಿನಲ್ಲಿ ಮೂರು ಸಾವಿರ ಪಡಿತರ ಕಾರ್ಡ್ಗಳನ್ನು ರದ್ದುಪಡಿಸಿರುವ ಕ್ರಮ ಸರಿಯಲ್ಲ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ತಾಲ್ಲೂಕಿನ ಕೊಡಿಗೇಹಳ್ಳಿಯಲ್ಲಿ ಸೋಮವಾರ ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು.
ಆದಾಯದ ಮಿತಿ, ಜಾತಿ ಕಾರಣ ಸೇರಿದಂತೆ ವಿವಿಧ ಕಾರಣಗಳನ್ನು ನೀಡುವ ಮೂಲಕ ಪಡಿತರ ಕಾರ್ಡ್ಗಳನ್ನು ರದ್ದುಮಾಡಿ ಉಚಿತವಾಗಿ ದೊರೆಯುತಿದ್ದ ಅಕ್ಕಿ ಇಲ್ಲದೆ ಬಡವರ ಬದುಕನ್ನು ರಾಜ್ಯ ಸರ್ಕಾರ ದುಸ್ಥರವಾಗಿಸದುತ್ತಿದೆ.
ತಾಲ್ಲೂಕಿನ ಹಲವಾರು ಜನ ಹಿರಿಯ ನಾಗರೀಕರಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಲ್ಲಿ ದೊರೆಯುತ್ತಿದ್ದ ಪಿಂಚಣಿ ಹಣ ಆರು ತಿಂಗಳಿಂದಲು ಬಂದಿಲ್ಲ. ಇದರಿಂದಾಗಿ ಹಿರಿಯ ನಾಗರೀಕರು ಅಂಚೆ ಇಲಾಖೆ, ತಾಲ್ಲೂಕು ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಕರ ಪತ್ರಗಳನ್ನು ವಿತರಿಸುವ ಮೂಲಕ ಮಾಹಿತಿ ನೀಡಿದರು.
ಈ ವೇಳೆ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ, ಪಿಂಚಣಿ ಪಡೆಯಲು ಇರುವ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.
ಸಭೆಯ ಅಧ್ಯಕ್ಷತೆಯನ್ನು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರಾಜು ವಹಿಸಿದ್ದರು. ಉಪಾಧ್ಯಕ್ಷೆ ಗೌರಮ್ಮ, ಟಿಎಪಿಎಂಸಿಎಸ್ ಅಧ್ಯಕ್ಷ ಡಿ.ಸಿದ್ದರಾಮಯ್ಯ, ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….