ಕೃಷಿ ಕಾಯ್ದೆಗಳನ್ನು ತಡೆಹಿಡಿಯಲಾಗಿದೆ, ನಿಮ್ಮ ಪ್ರತಿಭಟನೆ ಯಾವುದರ ವಿರುದ್ಧ: ರೈತರ ಸಂಘಕ್ಕೆ ಸುಪ್ರೀಂ ಪ್ರಶ್ನೆ

ನವದೆಹಲಿ: ಮೂರು ಹೊಸ ಕೃಷಿ ಕಾಯ್ದೆಗಳನ್ನು ಈಗಾಗಲೇ ತಡೆಹಿಡಿಯಲಾಗಿದೆ. ಶಾಸನಗಳೇ ಚಾಲ್ತಿಯಲ್ಲಿಲ್ಲದಿದ್ದಾಗ ನೀವು ಯಾವುದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೀರಾ ಎಂದು ರೈತರ ಸಂಘಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಇಲ್ಲಿನ ಜಂತರ್ ಮಂತರ್‌ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ ಮೇಲೂ ಪ್ರತಿಭಟನೆ ನಡೆಸುವ ಅವಶ್ಯಕತೆ ಇದೆಯಾ ಎಂದು ಹೇಳಿದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು  ಲಖಿಂಪುರ್ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರವನ್ನು ಉಲ್ಲೇಖಿಸಿದ್ದು ಅಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಪೀಠ ಹೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ಈ ವಿಷಯವು ಅತ್ಯುನ್ನತ ಸಾಂವಿಧಾನಿಕ ನ್ಯಾಯಾಲಯದ ಮುಂದೆ ಇದ್ದಾಗ, ಅದೇ ವಿಷಯದ ಕುರಿತು ಯಾರೂ ಬೀದಿಗಿಳಿಯುವಂತಿಲ್ಲ ಎಂದು ಹೇಳಿದರು.

ರೈತರು ಮತ್ತು ಕೃಷಿಕರ ಸಂಘಟನೆಯಾದ ಕಿಸಾನ್ ಮಹಾಪಂಚಾಯತ್ ಮತ್ತು ಅದರ ಅಧ್ಯಕ್ಷರು ಶಾಂತಿಯುತ ಮತ್ತು ಅಹಿಂಸಾತ್ಮಕ ಸತ್ಯಾಗ್ರಹವನ್ನು ಆಯೋಜಿಸಲು ಜಂತರ್ ಮಂತರ್‌ನಲ್ಲಿ ರೈತರು ಅಥವಾ ಪ್ರತಿಭಟನಾಕಾರರಿಗೆ ಸ್ಥಳಾವಕಾಶ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ್ದರು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ತಮಿಳುನಾಡು, ಬಂಗಾಳ ಚುನಾವಣೆ ನಡೆಯುತ್ತಿರುವಾಗ, ತಮ್ಮ ಪಕ್ಷದ ಪರ ಭಾಷಣಕ್ಕಾಗಿ ಸರಕಾರಿ ಸ್ವಾಮ್ಯದ ದೂರದರ್ಶನವನ್ನು ಮೋದಿ (Modi)ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

[ccc_my_favorite_select_button post_id="121155"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!