ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 11 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಹೊಸದಾಗಿ 02 ಕರೊನಾ ಪ್ರಕರಣಗಳು ವರದಿಯಾಗಿದ್ದು, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲೂಕಿನಲ್ಲಿ ಸೋಮವಾರವೂ ಸಹ ಶೂನ್ಯ ಸೋಂಕಿತರು ವರದಿಯಾಗಿದೆ.
ಜಿಲ್ಲಾಡಳಿತ ಸೋಮವಾರ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ಮತ್ತು ದೇವನಹಳ್ಳಿ ತಾಲೂಕಿನ ತಲಾ ಓರ್ವ ಪುರುಷರಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 81 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 153ಕ್ಕೆ ಇಳಿಕೆಯಾಗಿದೆ.
ಉಳಿದಂತೆ ಜಿಲ್ಲೆಯ 2084 ಮಂದಿಯನ್ನು ಕಡ್ಡಾಯ ಗೃಹ ಬಂದನದಲ್ಲಿ ಇಡಲಾಗಿದ್ದು,
ಇಂದಿನ ವರದಿಯ ಅನ್ವಯ 1984 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….