ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 25 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಹೊಸದಾಗಿ 06 ಕರೊನಾ ಪ್ರಕರಣಗಳು ವರದಿಯಾದೆ.
ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾದ ದೇವನಹಳ್ಳಿ ತಾಲೂಕಿನ ಓರ್ವ ಮಹಿಳೆ ಮೃತರಾಗಿದ್ದರೆ, ನೆಲಮಂಗಲ ಮತ್ತು ದೇವನಹಳ್ಳಿ ತಾಲೂಕಿನಲ್ಲಿಂದು ಶೂನ್ಯ ಸೋಂಕಿತರು ವರದಿಯಾಗಿದೆ.
ಮೃತರ ವರದಿ: ದೇವನಹಳ್ಳಿ ತಾಲೂಕಿನ 37 ವರ್ಷದ ಸೋಂಕಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಬುಲೆಟಿನ್ ವರದಿ ತಿಳಿಸಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ಹೊಸಕೋಟೆ ತಾಲೂಕಿನ ಓರ್ವ ಪುರುಷ, 03 ಮಹಿಳೆಯರು ಸೇರಿ 04. ದೊಡ್ಡಬಳ್ಳಾಪುರ ತಾಲೂಕಿನ ಇಬ್ಬರು ಪುರುಷರು ಸೇರಿ ಜಿಲ್ಲೆಯಲ್ಲಿ ಒಟ್ಟು 06 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 48 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 133ಕ್ಕೆ ಇಳಿಕೆಯಾಗಿದೆ.
ಉಳಿದಂತೆ ಜಿಲ್ಲೆಯ 2064 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದ್ದು,
ಇಂದಿನ ವರದಿಯ ಅನ್ವಯ 1834 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….